ಕಾಶ್ಮೀರದಲ್ಲಿ ಇಂದು ಮಧ್ಯರಾತ್ರಿಯಿಂದ ರಾಷ್ಟ್ರಪತಿ ಆಡಳಿತ ಜಾರಿ
ಜಮ್ಮು ಮತ್ತು ಕಾಶ್ಮೀರದಲ್ಲಿರುವ ಆರು ತಿಂಗಳ ರಾಜ್ಯಪಾಲರ ಆಡಳಿತ ಬುಧವಾರ ಅಂತ್ಯಗೊಳ್ಳಲಿದ್ದು, ಇಂದು ಮಧ್ಯರಾತ್ರಿಯಿಂದ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿರುವ ಆರು ತಿಂಗಳ ರಾಜ್ಯಪಾಲರ ಆಡಳಿತ ಬುಧವಾರ ಅಂತ್ಯಗೊಳ್ಳಲಿದ್ದು, ಇಂದು ಮಧ್ಯರಾತ್ರಿಯಿಂದ ರಾಷ್ಟ್ರಪತಿ ಆಡಳಿತ ಜಾರಿಗೆ ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಣಿವೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಸಹಿ ಹಾಕಿದ್ದು, ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಮಾಡಿದ್ದ ಶಿಫಾರಸಿಗೆ ಕಳೆದ ಸೋಮವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು.
ಕಳೆದ ಜೂನ್ ನಲ್ಲಿ ಬಿಜೆಪಿ, ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದ ನಂತರ ರಾಜ್ಯಪಾಲರ ಆಡಳಿತ ಜಾರಿಗೊಳಿಸಲಾಗಿತ್ತು. ಆರು ತಿಂಗಳ ರಾಜ್ಯಪಾಲರ ಆಡಳಿತ ಅಂತ್ಯಗೊಂಡ ನಂತರ ಪಿಡಿಪಿ, ಕಾಂಗ್ರೆಸ್ ಹಾಗೂ ಎನ್ ಸಿ ಸೇರಿ ಸರ್ಕಾರ ರಚಿಸಲು ಮುಂದಾಗಿದ್ದವು. ಆದರೆ ಇದಕ್ಕೆ ಅವಕಾಶ ನೀಡದ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು, ನವೆಂಬರ್ 21ರಂದು ಕಣಿವೆ ರಾಜ್ಯದ ವಿಧಾನಸಭೆಯನ್ನು ವಿಸರ್ಜಿಸಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.