ಮುಕ್ತಾರ್ ಅಬ್ಬಾಸ್ ನಕ್ವಿ 
ದೇಶ

ಮಾತನಾಡಲು ಮನಮೋಹನ್ ಸಿಂಗ್ ಅವರಿಗೆ ಬೇರೆಯವರ ಸ್ಕ್ರಿಪ್ಟ್ ಬೇಕು, ಮೋದಿಗೆ ಬೇಕಿಲ್ಲ: ನಖ್ವಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮಾತನಾಡಲು ಬೇರೆಯವರು ಬರೆದುಕೊಟ್ಟ ಸ್ಕ್ರಿಪ್ಟ್ ಬೇಕಾಗುತ್ತದೆ, ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ...

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮಾತನಾಡಲು ಬೇರೆಯವರು ಬರೆದುಕೊಟ್ಟ ಸ್ಕ್ರಿಪ್ಟ್ ಬೇಕಾಗುತ್ತದೆ, ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮಾತನಾಡಲು ಯಾವುದೇ ಸ್ಕ್ರಿಪ್ಟ್ ಬೇಕಾಗಿಲ್ಲ ಎಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಕ್ವಿ ಹೇಳಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕರಾದ ಸಿಂಗ್ ಮಾಧ್ಯಮಗಳೊಂದಿಗೆ ಮಾತನಾಡಲು ಯಾರೋ ಬರೆದು ಕೊಡಬೇಕು, ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಈ ಸ್ಕ್ರಿಪ್ಟ್ ಅವಶ್ಯಕತೆಯಿಲ್ಲ ಎಂದು ತಿಳಿಸಿದ್ದಾರೆ.
ಅವರು ಪ್ರಧಾನ ಮಂತ್ರಿಯಾಗಿದ್ದಾಗಲೂ ಬೇರೆಯವರು ಬರೆದುಕೊಟ್ಟಿದ್ದನ್ನು ಮಾತಾಡುತ್ತಿದ್ದರೂ, ಈಗಲು ಅದನ್ನೇ ಮಾಡುತ್ತಿದ್ದಾರೆ ಎಂದು ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳ ಮುಂದೆ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಹೆದರಬಹುದು ಆದರೆ ನಾನು ಎಂದಿಗೂ ಮಾಧ್ಯಮಗಳ ಮುಂದೆ ಮಾತನಾಡಲು ಹೆದರಿದಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದರು. 
ಚೇನ್‌ಜಿಂಗ್ ಇಂಡಿಯಾ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಮನಮೋಹನ್ ಸಿಂಗ್ ಅವರು ಎಂತಹ ಪರಿಸ್ಥಿತಿಯಲ್ಲೂ ನಾನು ಮಾಧ್ಯಮಗಳ ಮುಂದೆ ಮಾತನಾಡಲು ಹೆದರಿರಲಿಲ್ಲ. ಆದರೆ ಇಂದಿನ ಪ್ರಧಾನಿ ಮಾಧ್ಯಮಗಳ ಮುಂದೆ ಮಾತನಾಡಲು ಹೆದರುತ್ತಿದ್ದಾರೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli

IPL 2026: ವೈಭವ್ ಸೂರ್ಯವಂಶಿ ಆರ್ಭಟಕ್ಕೆ ಮಕಾಡೆ ಮಲಗಿದ LSG, ಗೆದ್ದ RR ಪ್ಲೇ ಆಫ್ ಕನಸು ಜೀವಂತ!

ಮಾರ್ತಾಂಡ ಆನೆ ಕೊಂದ ಕಂಜನ್ ದಸರಾದಿಂದ ಶಾಶ್ವತ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶ

SCROLL FOR NEXT