ದೇಶ

ಶರಣಾಗಲು ನನಗೆ ತಿಂಗಳಿಗಿಂತಲೂ ಹೆಚ್ಚು ಸಮಯ ಬೇಕು: ಸಜ್ಜನ್ ಕುಮಾರ್

Shilpa D
ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದ ದಂಗೆಯಲ್ಲಿ ತಪ್ಪಿತಸ್ಥರಾಗಿರುವ ಸಜ್ಜನ್ ಕುಮಾರ್ ಶರಣಾಗಲು  30 ದಿನಕ್ಕಿಂತಲೂ ಹೆಚ್ಚು ಸಮಯ ಬೇಕು ಎಂದು ದೆಹಲಿ ಹೈಕೋರ್ಟ್ ನಲ್ಲಿ ಅಪೀಲು ಸಲ್ಲಿಸಿದ್ದಾರೆ.
ಸಜ್ಜನ್ ಕುಮಾರ್ ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಲಿದ್ದಾರೆ. 1984ರ ಸಿಖ್​ ವಿರೋಧಿ ದಂಗೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರು ಹೈಕೋರ್ಟ್ ತೀರ್ಪು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.
ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಸಜ್ಜನ್ ಕುಮಾರ್ ದೋಷಿ ಎಂದು ತೀರ್ಪು ನೀಡಿದ್ದ ದೆಹಲಿ ಹೈಕೋರ್ಟ್, ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿದೆ. ಅಲ್ಲದೆ ಡಿಸೆಂಬರ್ 31ರೊಳಗೆ ಶರಣಾಗುವಂತೆ ಆದೇಶಿಸಿದೆ.
1984ರ ಅಕ್ಟೋಬರ್​ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಬಳಿಕ ದೆಹಲಿ ಕಂಟೋನ್ ಮೆಂಟ್​ ಏರಿಯಾದಲ್ಲಿ ಗಲಭೆ ನಡೆದಿತ್ತು. ಈ ವೇಳೆ ಐವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಸ್​​ ಮುರಳೀಧರ್​ ಹಾಗೂ ನ್ಯಾ.ವಿನೋದ್​ಗೋಯಲ್ ಅವರ ಪೀಠ ಇಂದು ತೀರ್ಪು ಪ್ರಕಟಿಸಿದೆ. 
SCROLL FOR NEXT