ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ 
ದೇಶ

ರಾಮ ಮಂದಿರ ನಿರ್ಮಾಣ ಬಿಜೆಪಿಯ ಮತ್ತೊಂದು 'ಜುಮ್ಲಾ': ಶಿವಸೇನೆ

ತನ್ನ ಮಿತ್ರ ಪಕ್ಷ ಬಿಜೆಪಿ ವಿರುದ್ಧ ಗುರುವಾರ ಮತ್ತೆ ವಾಗ್ದಾಳಿ ನಡೆಸಿದ ಶಿವಸೇನೆ, ಅಯೋಧ್ಯೆಯ ವಿವಾದಿತ ಸ್ಥಳದಲ್ಲಿ ರಾಮ ಮಂದಿರ....

ಮುಂಬೈ: ತನ್ನ ಮಿತ್ರ ಪಕ್ಷ ಬಿಜೆಪಿ ವಿರುದ್ಧ ಗುರುವಾರ ಮತ್ತೆ ವಾಗ್ದಾಳಿ ನಡೆಸಿದ ಶಿವಸೇನೆ, ಅಯೋಧ್ಯೆಯ ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣ ಬಿಜೆಪಿಯ ಮತ್ತೊಂದು 'ಜುಮ್ಲಾ'(ಸುಳ್ಳು ಭರವಸೆ) ಎಂದು ಹೇಳಿದೆ.
ಇತ್ತೀಚಿಗೆ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದ ನಂತರವೂ ಎಚ್ಚೆತ್ತುಕೊಂಡಿಲ್ಲ ಮತ್ತು ಈ ಸಂಬಂಧ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಂದ ಕಲಿಯಲು ಸಿದ್ಧರಿಲ್ಲ ಎಂದು ಸೇನೆ ಆರೋಪಿಸಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಬೇಕು ಎಂಬ ಬಗ್ಗೆ ಬಿಜೆಪಿಯಲ್ಲೇ ಒತ್ತಡ ಇದೆ. ಆದರೆ ಶ್ರೀರಾಮನಿಗೆ ಅಚ್ಚೇ ದಿನ್ ಬರುವುದು ಯಾವಾಗ? ಎಂದು ಶಿವಸೇನೆ ಪ್ರಶ್ನಿಸಿದೆ.
ಮೋಹನ್ ಭಾಗವತ್ ಅವರು ಭಗವದ್ಗೀತೆಯನ್ನು ಉಲ್ಲೇಖಿಸುತ್ತಾ, ನಾನು ಮಾಡುತ್ತಿರುವದು ಅತ್ಯುತ್ತಮವಾದುದು ಎಂದು ಭಾವಿಸಿ ಅದನ್ನು ಮಾಡಬೇಕು ಎಂದು ಹೇಳುವ ಮೂಲಕ ಬಿಜೆಪಿಗೆ ಮಾರ್ಗದರ್ಶಿ ತತ್ವ ನೀಡಿದ್ದಾರೆ. ಆದರೂ ಬಿಜೆಪಿ ಸರ್ಕಾರ ಕುಂಭಕರ್ಣನಂತೆ ವರ್ತಿಸುತ್ತಿದೆ. ಮೂರು ರಾಜ್ಯಗಳ ಸೋಲಿನ ನಂತರವೂ ಎಚ್ಚೆತ್ತುಕೊಂಡಿಲ್ಲ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಕಿಡಿಕಾರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)