ಪಣಜಿ: ಪಾಲೋಲಿಯಂ ಬೀಚ್ ಸಮೀಪ ಬ್ರಿಟಿಷ್ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ತಮಿಳುನಾಡು ಮೂಲದ 30 ವರ್ಷದ ವ್ಯಕ್ತಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ತಂಜಾವೂರಿನ ರಾಮಚಂದ್ರನ್ ಎಂದು ಗುರುತಿಸಲಾಗಿದ್ದು, ಆರೋಪಿ ಇಂದು ಬೆಳಗಿನ ಜಾವ 4.30ರ ಸುಮಾರಿಗೆ ಬ್ರಿಟಿಷ್ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ಆಕೆಯ ಬಳಿ ಇದ್ದ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾನೆ ಎಂದು ದಕ್ಷಿಣ ಗೋವಾ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಗವಾಸ್ ಅವರು ತಿಳಿಸಿದ್ದಾರೆ.
ರಾಮಚಂದ್ರನ್ ವಿರುದ್ಧ ಅತ್ಯಾಚಾರ ಹಾಗೂ ದರೋಡೆ ಪ್ರಕರಣ ದಾಖಲಿಸಲಾಗಿದೆ. ಕಣಕೋನ ರೇಲ್ವೆ ನಿಲ್ದಾಣದಿಂದ ತನ್ನ ಅತಿಥಿ ಗೃಹಕ್ಕೆ ತೆರಳುತ್ತಿದ್ದ ಬ್ರಿಟಿಷ್ ಮಹಿಳೆ ಮೇಲೆ ಅತ್ಯಾಚಾರ ಎಸಲಾಗಿದೆ. ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಗವಾಸ್ ಅವರು ಹೇಳಿದ್ದಾರೆ.
ಆರೋಪಿ ಮೊದಲು ಬ್ರಿಟಿಷ್ ಮಹಿಳೆ ಬಳಿ ಇದ್ದ ವಸ್ತು, ಹಣವನ್ನು ದೋಚುತ್ತಾನೆ. ನಂತರ ತಪ್ಪಿಸಿಕೊಳ್ಳುತ್ತಿದ್ದ ಮಹಿಳೆಯನ್ನು ಅಟ್ಟಿಸಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics