ದೇಶ

ಪಶ್ಚಿಮ ಬಂಗಾಳ: ಬಿಜೆಪಿ ರಥಯಾತ್ರೆಗೆ ಅನುಮತಿ ನಿರಾಕರಣೆ; ತನ್ನದೇ ಆದೇಶ ಹಿಂಪಡೆದ ಹೈಕೋರ್ಟ್

Nagaraja AB

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಥಯಾತ್ರೆಗೆ ಅವಕಾಶ ಕಲ್ಪಿಸಿದ ಏಕ ಸದಸ್ಯ ಪೀಠದ ಆದೇಶವನ್ನು ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಾಧೀಶರನ್ನೊಳಗೊಂಡ ವಿಭಾಗೀಯ ಪೀಠ ಪ್ರಶ್ನಿಸಿದೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಪ್ರಜಾಪ್ರಭುತ್ವ ಉಳಿಸಿ ರಥಯಾತ್ರೆಗೆ ಅನುಮತಿ ನೀಡಿದ್ದ ಕಲ್ಕತ್ತಾ ಹೈಕೋರ್ಟ್ ನ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿತ್ತು.

ಪಶ್ಚಿಮ ಬಂಗಾಳದಲ್ಲಿ ರಥ ಯಾತ್ರೆಗೆ ಅನುಮತಿ ನಿರಾಕರಿಸಿದ್ದ ಪಶ್ಚಿಮ ಬಂಗಾಳ ಸರ್ಕಾರದ ಆದೇಶ ಪ್ರಶ್ನಿಸಿ ಕಳೆದ ಸೋಮವಾರ ಬಿಜೆಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಕೆಲ ಷರತ್ತುಗಳನ್ನು ವಿಧಿಸಿ ಯಾತ್ರೆಗೆ ಅನುಮತಿ ನೀಡಿ ಎಂದು ಸರ್ಕಾರಕ್ಕೆ ಗುರುವಾರ ಸೂಚಿಸಿತ್ತು.

ರಥ ಯಾತ್ರೆಯಿಂದ ಕೋಮುಗಲಭೆ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ರಥ ಯಾತ್ರೆಗೆ ಅನುಮತಿ ನೀಡಲು ನಿರಾಕರಿಸಿತ್ತು.

ಆದಾಗ್ಯೂ, ರಾಜ್ಯಸರ್ಕಾರ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠದಲ್ಲಿ ಪ್ರಶ್ನಿಸಿದ್ದರು. ಈಗ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದೆ.

SCROLL FOR NEXT