ಪ್ರಧಾನಿ ಮೋದಿ ಅಭದ್ರ ಸರ್ವಾಧಿಕಾರಿ: ಕಂಪ್ಯೂಟರ್ ಗಳ ಮೇಲೆ ನಿಗಾ ಆದೇಶದ ವಿರುದ್ಧ ರಾಹುಲ್ ವಾಗ್ದಾಳಿ
ಯಾವುದೇ ಕಂಪ್ಯೂಟರ್ ನಲ್ಲಿ ರಚಿತವಾದ, ರವಾನಿಸಲ್ಪಟ್ಟಿರುವ, ಸ್ವೀಕರಿಸಿದ ಅಥವಾ ಸಂಗ್ರಹಿಸಿದ ಮಾಹಿತಿಯ ಮೇಲೆ ನಿಗಾ ವಹಿಸಲು...
ನವದೆಹಲಿ: ಯಾವುದೇ ಕಂಪ್ಯೂಟರ್ ನಲ್ಲಿ ರಚಿತವಾದ, ರವಾನಿಸಲ್ಪಟ್ಟಿರುವ, ಸ್ವೀಕರಿಸಿದ ಅಥವಾ ಸಂಗ್ರಹಿಸಿದ ಮಾಹಿತಿಯ ಮೇಲೆ ನಿಗಾ ವಹಿಸಲು ಕೇಂದ್ರ ಸರ್ಕಾರ 10 ಕೇಂದ್ರೀಯ ಸಂಸ್ಥೆಗಳಿಗೆ ಅಧಿಕಾರ ನೀಡುವ ಆದೇಶದ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
"ಭಾರತವನ್ನು ಪೋಲೀಸ್ ರಾಜ್ಯವಾಗಿ ಪರಿವರ್ತಿಸುವುದರಿಂದ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಆಗಲ್ಲ, ಇದು ಕೇವಲ 1 ಶತಕೋಟಿ ಭಾರತೀಯರಿಗೆ ಸಾಬೀತಾಗಿದೆ, ನೀವು ನಿಜವಾಗಿಯೂ ಅಭದ್ರ ಸರ್ವಾಧಿಕಾರಿ ಆಗಿದ್ದೀರಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.