ನವದೆಹಲಿ: ರಾಜ್ಯದಲ್ಲಿ ದಲಿತ, ಬುಡಕಟ್ಟು ಸಮುದಾಯಕ್ಕೆ ಸೇರಿದ 52 ಜನರು ಜೀತಪದ್ಧತಿಯಲ್ಲಿ ಸಿಲುಕಿದ್ದರೂ ರಾಜ್ಯ ಸಮ್ಮಿಶ್ರ ಸರ್ಕಾರ ಸಂಪುಟ ವಿಸ್ತರಣೆಯಲ್ಲಿ ವ್ಯಸ್ತವಾಗಿದೆ ಎಂದು ಆರೋಪಿಸಿದ್ದಾರೆ.
ಸಮಸ್ಯೆಯಲ್ಲಿ ಸಿಲುಕಿರುವ ಜನರಿಗೆ ಸಹಾಯ ಮಾಡಲು ಅಮಿತ್ ಶಾ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. " ದಲಿತ ಹಾಗೂ ಬುಡಕಟ್ಟು ಜನರು ಗುಲಾಮಗಿರಿಯ ಪದ್ಧತಿಯಲ್ಲಿ ಸಿಲುಕಿ, ಅಮಾನುಷ ವಾತಾವರಣವನ್ನು ಎದುರಿಸುತ್ತಿದ್ದಾರೆ. ಆದರೆ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಮಾತ್ರ ಸಚಿವ ಸಂಪುಟ ವಿಸ್ತರಣೆಯಲ್ಲಿ ವ್ಯಸ್ತವಾಗಿದೆ. ಇದನ್ನು ಜನತೆ ನೋಡುತ್ತಿದ್ದಾರೆ. ಸಮಸ್ಯೆಯಲ್ಲಿ ಸಿಲುಕಿರುವವರಿಗೆ ಸಹಾಯ ಮಾಡುವಂತೆ ಕಾರ್ಯಕರ್ತರಿಗೆ ಮನವಿ ಮಾಡುತ್ತಿದ್ದೇನೆ ಎಂದು ಅಮಿತ್ ಶಾ ಮಾಧ್ಯಮ ವರದಿಯೊಂದನ್ನು ಆಧರಿಸಿ ಟ್ವೀಟ್ ಮಾಡಿದ್ದಾರೆ.