ನವದೆಹಲಿ: ಅಜಾತ ಶತ್ರು, ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ 94ನೇ ಜನ್ಮದಿನವನ್ನು ಮಂಗಳವಾರ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ ಮೋದಿ ಸೇರಿದಂತೆ ಹಲವು ಗಣ್ಯಾತಿ ಗಣ್ಯರು ಪುಷ್ಪ ನಮನ ಸಲ್ಲಿಸಿದ್ದಾರೆ.
ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ವಾಜೇಪಿಯವರಿಗೆ ಪ್ರಧಾನಿಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಸೇರಿದಂತೆ ನೂರಾರು ಗಣ್ಯರು ಪುಷ್ಪನಮನ ಸಲ್ಲಿಸಿದರು.
ವಾಜಪೇಯಿಯವರ ಜನ್ಮದಿನ ಹಿನ್ನಲೆಯಲ್ಲಿ ನಿನ್ನೆಯಷ್ಟೇ ಅಟಲ್ ಸ್ಮರಣಾರ್ಥ ರೂ.100 ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದ್ದರು.