ನಿತಿನ್ ಗಡ್ಕರಿ 
ದೇಶ

ಸಂಸದರು, ಶಾಸಕರು ಸರಿಯಾಗಿ ಕೆಲಸ ಮಾಡದಿದ್ದರೆ ಪಕ್ಷದ ಮುಖ್ಯಸ್ಥರೇ ಹೊಣೆ: ನಿತಿನ್ ಗಡ್ಕರಿ

ಸಂಸದರು , ಶಾಸಕರ ಕಾರ್ಯಕ್ಷಮತೆ ಸರಿ ಇಲ್ಲದಿದ್ದರೆ ಪಕ್ಷದ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಬೇಕು ಎಂದು...

ನವದೆಹಲಿ: ಸಂಸದರು, ಶಾಸಕರ ಕಾರ್ಯಕ್ಷಮತೆ ಸರಿ ಇಲ್ಲದಿದ್ದರೆ ಪಕ್ಷದ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಬೇಕು ಎಂದು ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳುವ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಪರೋಕ್ಷವಾಗಿ  ಟಾಂಗ್ ನೀಡಿದ್ದಾರೆ.

ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತ ನಂತರ ಪಕ್ಷದ ನಾಯಕತ್ವ ವಿರುದ್ಧ ತೀಕ್ಷ್ಣವಾಗಿ ಟೀಕೆ ಮಾಡಿದ ನಿತಿನ್ ಗಡ್ಕರಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಗೃಹ ಸಚಿವಾಲಯದ ಯಶಸ್ಸಿಗೆ ತರಬೇತಿ ಹಾಗೂ ಕೌಶಲಯುತ ಐಎಎಸ್ , ಐಪಿಎಸ್ ಅಧಿಕಾರಿಗಳು ಪ್ರಮುಖ ಕಾರಣ. ಈ ಎಲ್ಲಾ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ, ನಾನು ಪಕ್ಷದ ಅಧ್ಯಕ್ಷನಾಗಿದ್ದುಕೊಂಡು  ಸಂಸದರು, ಶಾಸಕರು ಸರಿಯಾಗಿ ಕೆಲಸ ಮಾಡದಿದ್ದರೆ ಯಾರು ಜವಾಬ್ದಾರರಾಗಬೇಕಾಗುತ್ತದೆ? ಎಂದು ನಿತಿನ್ ಗಡ್ಕರಿ ಪ್ರಶ್ನಿಸಿದ್ದಾರೆ.

ಮಧ್ಯಪ್ರದೇಶ, ರಾಜಸ್ತಾನ, ಹಾಗೂ ಛತ್ತೀಸ್ ಗಡ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಸೋತ ಕೆಲವು ವಾರಗಳ ಬಳಿಕ ನಿತಿನ್ ಗಡ್ಕರಿ ಪಕ್ಷದ ನಾಯಕತ್ವವನ್ನು ಪ್ರಶ್ನಿಸಿದ್ದರು.
ಚುನಾವಣೆಯಲ್ಲಿ ಸೋತರೆ ಪಕ್ಷದ ನಾಯಕರೇ ಜವಾಬ್ದಾರಿ ಹೊರಬೇಕಾಗುತ್ತದೆ. ಸೋಲಿನ ಹೊಣೆ ಹೊರುವುದೂ ಸಹ ನಾಯಕತ್ವದ ಭಾಗವಾಗಿರಬೇಕು ಎಂದು ಅವರು ಹೇಳಿಕೆ ನೀಡಿದ್ದರು.
ಆದಾಗ್ಯೂ, ಈ ಬಗ್ಗೆ ಕೆಲ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಮಾಹಿತಿ ಹರಡುವ ಮೂಲಕ ಪಕ್ಷ ಮತ್ತು ತಮ್ಮ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಯತ್ನ ನಡೆಸಲಾಗುತ್ತಿದೆ ಎಂದು ತಮ್ಮ ಬ್ಲಾಗ್ ನಲ್ಲಿ ನಿತಿನ್ ಗಡ್ಕರಿ ಬರೆದುಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್