ದೇಶ

ವಾಜಪೇಯಿ ಸ್ಮಾರಕ ಲೋಕಾರ್ಪಣೆ: ರಾಷ್ಟ್ರಪತಿ, ಪ್ರಧಾನಿಯಿಂದ ಪುಷ್ಪ ನಮನ

Lingaraj Badiger
ನವದೆಹಲಿ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ 94ನೇ ಜನ್ಮದಿನದ ಅಂಗವಾಗಿ, ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ನಿರ್ಮಿಸಿರುವ ಅವರ ಸ್ಮಾರಕ 'ಸದೈವ ಅಟಲ್‌' ಅನ್ನು ಮಂಗಳವಾರ ಲೋಕಾರ್ಪಣೆ ಮಾಡಲಾಯಿತು.
ಇಂದು ಬೆಳಗ್ಗೆ ರಾಷ್ಟ್ರಪತಿ ರಾಮನಾಥ್ ಕೊವಿಂದ್, ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಅಟಲ್ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
ರಾಜ್‌ಘಾಟ್‌ ಬಳಿ 1.5 ಎಕರೆ ಪ್ರದೇಶದಲ್ಲಿ ಈ ಸ್ಮಾರಕವನ್ನು ಅಟಲ್‌ ಸ್ಮೃತಿ ನ್ಯಾಸ್‌ ಸೊಸೈಟಿಯು ಸುಮಾರು 10.5 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಿದೆ. 
ಬಿಜೆಪಿ ಮುಖಂಡ ವಿಜಯ್‌ಕುಮಾರ್‌ ಮಲ್ಹೋತ್ರಾ ಅಧ್ಯಕ್ಷರಾಗಿರುವ ಸೊಸೈಟಿಗೆ ಲೋಕಸಭಾ ಸ್ಪೀಕರ್‌ ಸುಮಿತ್ರಾ ಮಹಾಜನ್‌, ಕರ್ನಾಟಕ ರಾಜ್ಯಪಾಲ ವಿ.ಆರ್‌.ವಾಲಾ, ಬಿಹಾರ ರಾಜ್ಯಪಾಲ ಲಾಲ್‌ಜಿ ಟಂಡನ್‌, ಗುಜರಾತ್‌ ರಾಜ್ಯಪಾಲ ಒ.ಪಿ.ಕೊಹ್ಲಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮಲಾಲ್‌ ಸ್ಥಾಪಕ ಸದಸ್ಯರಾಗಿದ್ದಾರೆ.
ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ಕಳೆದ ಆಗಸ್ಟ್ 16ರಂದು ಕೊನೆ ಉಸಿರೆಳೆದಿದ್ದರು.
SCROLL FOR NEXT