15 ಗಣಿ ಕಾರ್ಮಿಕರು ಪರದಾಡುತ್ತಿದ್ದರೆ, ಮೋದಿ ಕ್ಯಾಮರಾಗಳಿಗೆ ಪೋಸ್ ನೀಡುತ್ತಿದ್ದಾರೆ: ರಾಹುಲ್ ಗಾಂಧಿ
ನವದೆಹಲಿ: ಮೇಘಾಲಯದಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಕಲ್ಲಿದ್ದಲು ಗಣಿಯಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ರಾಹುಲ್ ಗಾಂಧಿ ಪ್ರಧಾನಿ ವಿರುದ್ಧ ಟ್ವಿಟರ್ ನಲ್ಲಿ ಕಿಡಿ ಕಾರಿದ್ದಾರೆ.
" ರಕ್ಷಣಾ ಕಾರ್ಯಾಚರಣೆಗೆ ಸಾಧನಗಳ ಕೊರತೆಯಾಗಿದ್ದು ಒಂದೆಡೆ ಗಣಿ ಕಾರ್ಮಿಕರು ಆಮ್ಲಜನಕವಿಲ್ಲದೇ ಪರದಾಡುತ್ತಿದ್ದರೆ, ಪ್ರಧಾನಿ ನರೇಂದ್ರ ಮೋದಿ ಫೋಟೊಗಳಿಗೆ ಪೋಸ್ ಕೊಡುತ್ತಿದ್ದಾರೆ" ಎಂದು ಟ್ವೀಟ್ ಮಾಡಿದ್ದಾರೆ. ಕೇಂದ್ರ ಸರ್ಕಾರ ಮೇಘಾಲಯದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಸಾಧನಗಳನ್ನು ಒದಗಿಸುವುದರತ್ತ ಗಮನ ಹರಿಸುತ್ತಿಲ್ಲ. " ಪ್ರಧಾನಮಂತ್ರಿಗಳೇ ದಯವಿಟ್ಟು ಗಣಿ ನೌಕರರನ್ನು ರಕ್ಷಿಸಿ ಎಂದು ಟ್ವೀಟ್ ಮಾಡುವ ಮೂಲಕ ರಾಹುಲ್ ಗಾಂಧಿ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.
ಮೇಘಾಲಯದಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಗಣಿಯಲ್ಲಿ 15 ಜನ ನೌಕರರು ಸಿಲುಕಿದ್ದು, ಗಣಿಪ್ರದೇಶದಲ್ಲಿ ನೀರು ಆವರಿಸಿಕೊಂಡಿರುವ ಪರಿಣಾಮ ನೌಕರರು ಅಪಾಯಕ್ಕೆ ಸಿಲುಕಿದ್ದಾರೆ. ಆದರೆ ಅಪಾರ ಪ್ರಮಾಣದ ನೀರನ್ನು ಹೊರತೆಗೆಯುವುದಕ್ಕೆ ಉಪಕರಣಗಲ ಕೊರತೆ ಎದುರಾಗಿದ್ದು ರಕ್ಷಣಾ ಕಾರ್ಯಾಚರಣೆ ನಿಧಾನವಾಗಿದೆ.