ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

17 ಸಾವಿರ ಅಡಿ ಎತ್ತರದಲ್ಲಿ ಕೆಟ್ಟು ನಿಂತ ಹೆಲಿಕಾಫ್ಟರ್ ರಿಪೇರಿ, ಭಾರತೀಯ ಯೋಧರ ವಿಶ್ವದಾಖಲೆ!

17 ಸಾವಿರ ಅಡಿಗಳ ಮೇಲಿನ ಸಿಯಾಚಿನ್ ಗ್ಲೇಸಿಯರ್ ನಲ್ಲಿ ಪತನಗೊಂಡಿದ್ದ ಯುದ್ಧ ಹೆಲಿಕಾಫ್ಟರ್ ಅನ್ನು ಭಾರತೀಯ ಯೋಧರು ರಿಪೇರಿ ಮಾಡಿ ಬೇಸ್ ಕ್ಯಾಂಪ್ ವಾಪಸ್ ತರುವ ಮೂಲಕ...

ಭಾರತೀಯ ಸೇನೆ
Vishwanath S
Updated On : 27 Dec 2018, 8:05 am
ನವದೆಹಲಿ: 17 ಸಾವಿರ ಅಡಿಗಳ ಮೇಲಿನ ಸಿಯಾಚಿನ್ ಗ್ಲೇಸಿಯರ್ ನಲ್ಲಿ ಪತನಗೊಂಡಿದ್ದ ಯುದ್ಧ ಹೆಲಿಕಾಫ್ಟರ್ ಅನ್ನು ಭಾರತೀಯ ಯೋಧರು ರಿಪೇರಿ ಮಾಡಿ ಬೇಸ್ ಕ್ಯಾಂಪ್ ವಾಪಸ್ ತರುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದಾರೆ. 
1984ರ ಏಪ್ರಿಲ್ 13ರಂದು ಆಪರೇಷನ್ ಮೇಘದೂತ್ ಅನ್ನು ಪ್ರಾರಂಭಿಸಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೂ ಸರಿ ಸುಮಾರು 40 ಹೆಲಿಕಾಪ್ಟರ್ ಗಳು ಗ್ಲೇಸಿಯರ್ ನಲ್ಲಿ ಕೆಟ್ಟು ನಿಂತಿವೆ ಅಥವಾ ಅಪಘಾತಕ್ಕೀಡಾಗಿವೆ. ಈ ಹೆಲಿಕಾಫ್ಟರ್ ಗಳನ್ನು ವಾಪಸ್ ತರಲು ಸಾಧ್ಯವಾಗಿರಲಿಲ್ಲ. ಇದೇ ಮೊದಲ ಬಾರಿಗೆ ಭಾರತೀಯ ಸೇನೆ ಯುದ್ಧ ಹೆಲಿಕಾಫ್ಟರ್ ರಿಪೇರಿ ಮಾಡುವ ಮೂಲಕ ವಿಶ್ವದಾಖಲೆ ಮಾಡಿದೆ.
ಕಳೆದ ಜನವರಿಯಲ್ಲಿ ಎಎಲ್ಎಚ್ ಧ್ರುವ ಹೆಲಿಕಾಫ್ಟರ್ ಸೈನಿಕರಿಗೆ ನಿತ್ಯ ಬಳಕೆಯ ವಸ್ತುಗಳನ್ನು ಪೂರೈಸಲು ಗ್ಲೇಸಿಯರ್ ಗೆ ತೆರಳಿತ್ತು. ಈ ಸಂದರ್ಭದಲ್ಲಿ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಪೈಲೆಟ್ ತಕ್ಷಣ ಹೆಲಿಕಾಪ್ಟರ್ ಅನ್ನು ಮಂಜಿನ ಮೇಲೆ ಇಳಿಸಿದ್ದರು. ಆ ನಂತರ ಹೆಲಿಕಾಪ್ಟರ್ ಹಿಮದಲ್ಲಿ ಸಿಲುಕಿತ್ತು. ಅದನ್ನು ಅಲ್ಲಿಂದ ಬಿಡಿಸಿ ಮತ್ತೆ ವಾಪಸ್ ತರಲು ಸಾಧ್ಯವಾಗಿರಲಿಲ್ಲ. ಮೈನಸ್ 25ರಿಂದ 30 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುವ ಈ ಪ್ರದೇಶದಲ್ಲಿ ಹೆಲಿಕಾಪ್ಟರ್ ಅನ್ನು ರಿಪೇರಿ ಮಾಡುವುದು ಸಾಧ್ಯವಾಗಿರಲಿಲ್ಲ.

Advertisement

Advertisement

ಆದರೆ ಭಾರತೀಯ ಯೋಧರು ಛಲ ಬಿಡದೆ ಎಎಲ್ಎಚ್ ಸ್ಕ್ವಾಡ್ರನ್ 203 ನ ಪೈಲಟ್ ಗಳು ಮತ್ತು ತಂತ್ರಜ್ಞರು ಹೆಲಿಕಾಪ್ಟರ್ ಅನ್ನು ಕಳೆದ ಜುಲೈನಲ್ಲಿ ರಿಪೇರಿ ಮಾಡಿಲು ಯಶಸ್ವಿಯಾಗಿದ್ದರು. ನಂತರ ಪೈಲಟ್ ಗಳು ಹೆಲಿಕಾಪ್ಟರ್ ಅನ್ನು ಸುರಕ್ಷಿತವಾಗಿ ಸಿಯಾಚಿನ್ ಬೇಸ್ ಕ್ಯಾಂಪ್ ಗೆ ತಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments