ದೇಶ

ಮೊದಲು ಪ್ರಾದೇಶಿಕ ಭಾಷೆಯಲ್ಲಿ ಸಾರ್ವಜನಿಕ ಪ್ರಕಟಣೆ: ವಿಮಾನ ನಿಲ್ದಾಣಗಳಿಗೆ ಸರ್ಕಾರ ಸೂಚನೆ

Lingaraj Badiger
ನವದೆಹಲಿ: ಸಾರ್ವಜನಿಕ ಪ್ರಕಟಣೆಗಳನ್ನು ಮೊದಲು ಪ್ರಾದೇಶಿಕ ಭಾಷಣೆಗಳಲ್ಲಿ ಪ್ರಕಟಿಸಿ. ನಂತರ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಪ್ರಕಟಿಸುವಂತೆ ಎಲ್ಲಾ ವಿಮಾನ ನಿಲ್ದಾಣಗಳಿಗೆ ಕೇಂದ್ರ ಸರ್ಕಾರ ಬುಧವಾರ ನಿರ್ದೇಶನ ನೀಡಿದೆ.
ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರ ಸೂಚನೆಯಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಈ ಆದೇಶ ಹೊರಡಿಸಿದ್ದು, ಮೊದಲು ಪ್ರಾದೇಶಿಕ ಭಾಷಣೆಗೆ ಮನ್ನಣೆ ನೀಡುವಂತೆ ಸೂಚಿಸಲಾಗಿದೆ.
ಈ ಸಂಬಂಧ ನಾಗರಿಕ ವಿಮಾನಯಾನ ಸಚಿವಾಲಯ ಖಾಸಗಿ ವಿಮಾನ ನಿಲ್ದಾಣ ನಿರ್ವಾಹಕರಿಗೂ ಸೂಚನೆ ನೀಡಿದ್ದು, ಮೊದಲು ಪ್ರಾದೇಶಿಕ ಭಾಷೆಯಲ್ಲಿ ಸಾರ್ವಜನಿಕ ಪ್ರಕಟಣೆಗಳನ್ನು ಹೊರಡಿಸುವಂತೆ ನಿರ್ದೇಶಿಸಿದೆ.
2016ರಲ್ಲೇ ಭಾರತದ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಸಂಬಂಧಿಸಿದ ಘೋಷಣೆಗಳು ಪ್ರಾದೇಶಿಕ ಭಾಷೆಯಲ್ಲಿ ಕೂಡ ಇರಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಈಗ ಪ್ರಾದೇಶಿಕ ಭಾಷೆ ಮೊದಲು ಬಳಸಬೇಕು ಎಂದು ಹೇಳಿದೆ.
SCROLL FOR NEXT