ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಜಾತಿ ಆಧಾರದ ಮೇಲೆ ರಾಷ್ಟ್ರಪತಿಗಳ ಅಂಗರಕ್ಷಕರ ನೇಮಕ ಆರೋಪ: ಕೇಂದ್ರದ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್

ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರ ಅಂಗರಕ್ಷಕರ ಹುದ್ದೆಗೆ ಕೇವಲ ಮೂರು ಜಾತಿಗಳನ್ನು ಮಾತ್ರ ಪರಿಗಣಿಸಲಾಗಿದೆ...

ರಾಷ್ಟ್ರಪತಿ ಭವನ
Lingaraj Badiger
Updated On : 26 Dec 2018, 3:38 am
ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರ ಅಂಗರಕ್ಷಕರ ಹುದ್ದೆಗೆ ಕೇವಲ ಮೂರು ಜಾತಿಗಳನ್ನು ಮಾತ್ರ ಪರಿಗಣಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ ಹಾಗೂ ಸೇನಾ ಮುಖ್ಯಸ್ಥರ ಪ್ರತಿಕ್ರಿಯೆ ಕೇಳಿದೆ.
ಜಾತಿ ಆಧಾರದ ಮೇಲೆ ರಾಷ್ಟ್ರಪತಿಗಳ ಅಂಗರಕ್ಷಕರ ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್ ಮುರಳಿಧರ್ ಮತ್ತು ಸಂಜೀವ್ ನರುಲ ಅವರು, ರಕ್ಷಣಾ ಸಚಿವಾಲಯಕ್ಕೆ, ಸೇನಾ ಮುಖ್ಯಸ್ಥರಿಗೆ, ರಾಷ್ಟ್ರಪತಿಗಳ ಅಂಗರಕ್ಷಕರ ಕಮಾಂಡರ್ ಗೆ ಹಾಗೂ ಸೇನಾ ನೇಮಕಾತಿ ನಿರ್ದೇಶಕರಿಗೆ ನೋಟಿಸ್ ನೀಡಿದ್ದಾರೆ. ಅಲ್ಲದೆ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.
ಸೆಪ್ಟೆಂಬರ್ 4, 2017ರಂದು ನಡೆದ ರಾಷ್ಟ್ರಪತಿಗಳ ಅಂಗರಕ್ಷಕರ ನೇಮಕಾತಿ ವೇಳೆ ಕೇವಲ ಜಾಟ್, ರಜಪೂತ್ ಮತ್ತು ಜಾಟ್ ಸಿಖ್ ರನ್ನು ಮಾತ್ರ ಪರಿಗಣಿಸಲಾಗಿದೆ. ತಾನು ಅಹಿರ್/ಯಾದವ್ ಜಾತಿಗೆ ಸೇರಿರುವುದರಿಂದ ಹುದ್ದೆಗೆ ಆಯ್ಕೆಯಾಗಲು ಬೇಕಾದ ಎಲ್ಲಾ ಅರ್ಹತೆಗಳಿದ್ದರೂ ತನ್ನನ್ನು ಪರಿಗಣಿಸಿಲ್ಲ ಎಂದು ಆರೋಪಿಸಿ ಹರಿಯಾಣ ಮೂಲದ ಗೌರವ್ ಯಾದವ್ ಅವರು ಪಿಐಎಲ್ ಸಲ್ಲಿಸಿದ್ದರು.

Advertisement

Advertisement

ರಾಷ್ಟ್ರಪತಿಗಳ ಅಂಗರಕ್ಷಕರ ನೇಮಕಾತಿಯಲ್ಲಿ ಕೇವಲ ಮೂರು ಜಾತಿಯನ್ನು ಪರಿಗಣಿಸಿರುವುದರಿಂದ ಅರ್ಹತೆ ಇದ್ದರೂ ಇತರೆ ನಾಗರಿಕರು ಅವಕಾಶ ವಂಚಿತರಾಗಿದ್ದಾರೆ ಎಂದು ಗೌರವ್ ಯಾದವ್ ಪರ ವಕೀಲ ರಾಮ್ ನರೇಶ್ ಯಾದವ್ ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments