ದೇಶ

ಒಂದೆಡೆ ಫೆಡರಲ್ ಫ್ರಂಟ್ ರಚನೆ ಕಸರತ್ತು, ಮತ್ತೊಂದೆಡೆ ಮೋದಿ ಭೇಟಿ ಮಾಡಿದ ಕೆಸಿಆರ್

Lingaraj Badiger
ನವದೆಹಲಿ: ಕಾಂಗ್ರೆಸ್ ಹಾಗೂ ಬಿಜೆಪಿ ಹೊರತಾದ ಫೆಡರಲ್ ಫ್ರಂಟ್ ರಚನೆಯ ಯತ್ನದ ಭಾಗವಾಗಿ ಇತ್ತೀಚಿಗಷ್ಟೇ ಪಶ್ಚಿಮ ಬಂಗಾಳ ಹಾಗೂ ಒಡಿಶಾ  ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದರು.
ಎರಡನೇ ಬಾರಿ ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿ ಪ್ರಧಾನಿಯನ್ನು ಭೇಟಿ ಮಾಡಿದ ಕೆಸಿಆರ್, ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.
ತೆಲಂಗಾಣದ 10 ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಹಣ, ತೆಲಂಗಾಣಕ್ಕೆ ಪ್ರತ್ಯೇಕ ಹೈಕೋರ್ಟ್​,  ಕೇಂದ್ರೀಯ ವಿದ್ಯಾಲಯಗಳು ಹಾಗೂ ಕರೀಂ ನಗರಕ್ಕೆ ಐಐಟಿ ನೀಡುವ ಕುರಿತಂತೆ ಕೆಸಿಆರ್ ಪ್ರಧಾನಿ ಜೊತೆ ಚರ್ಚಿಸಿದ್ದಾರೆ.
ಸದ್ಯ ದೆಹಲಿಯಲ್ಲಿರುವ ಕೆಸಿಆರ್ ಅವರು, ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.
SCROLL FOR NEXT