ದೇಶ

ಪ್ರಧಾನಿ ಜೊತೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ: ಮೇಕೆದಾಟು, ಬರ ಪರಿಸ್ಥಿತಿ ಕುರಿತು ಚರ್ಚೆ

Raghavendra Adiga
ನವದೆಹಲಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ.ಈ ವೇಳೆ ರಾಜ್ಯ ಹಿತಾಸಕ್ತಿಯ ಹಲವು ವಿಷಯಗಳನ್ನು  ಕುರಿತು ಚರ್ಚೆ ನಡೆದಿದೆ.
ಮೇಕೆದಾಟು ಸೇರಿದಂತೆ ವಿವಿಧ ನೀರಾವರಿ ಯೋಜನೆಗಳು, ರಾಜ್ಯದ ಬರ ಪರಿಸ್ಥಿತಿ ಹಾಗೂ ಉದ್ಯೋಗ ಖಾತರಿ ಯೋಜನೆಗೆ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಪ್ರಧಾನಿಗಳಿಗೆ ಮುಖ್ಯಮ್ನಂತ್ರಿಗಳು ಮನವಿ ಸಲ್ಲಿಸಿದ್ದಾರೆ.
ಮೇಕೆದಾಟು ಯೋಜನೆಗೆ ಅನುಮತಿ ನೀಡಿದ್ದಕ್ಕೆ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ ಕುಮಾರಸ್ವಾಮಿ ಚಿಕ್ಕಮಗಳೂರು, ಕೊಡಗಿನಲ್ಲಿ ಕಾಫಿ ಬೆಳೆಗಾರರ ಸಮಸ್ಯೆಗೆ NDRF ನಿಧಿ ಮೂಲಕ ರೈತರಿಗೆ ಪರಿಹಾರ ದೊರಕುವಂತೆ ಮಾಡಲು ಮನವಿ ಮಾಡಿದ್ದಾರೆ.
ಕಾರವಾರ, ಬಿಜಾಪುರ, ಚಿಕ್ಕಮಗಳೂರು, ಶಿವಮೊಗ್ಗ ಸೇರಿ 5 ಕಡೆ ವಿಮಾನ ನಿಲ್ದಾಣ , ಬೆಂಗಳೂರು ನಗರ ಸಬ್ ಅರ್ಬನ್ ರೈಲು, ಬೀದರ್‌ನಿಂದ ನಾಂದೇಡ್‌ಗೆ ರೈಲ್ವೆ ಲೈನ್, ಕೃಷ್ಣಾ ಮೇಲ್ದಂಡೆ ಯೋಜನೆ- ಮೂರನೇ ಹಂತವನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಸೇರಿ ನಾನಾ ವಿಚಾರಗಳ ಸಂಬಂಧ ಚರ್ಚೆ ಮಾಡಿ ಮನವಿ ಸಲ್ಲಿಸಲಾಗಿದೆ.
SCROLL FOR NEXT