ಮಹಾರಾಷ್ಟ್ರ: ಲೈಂಗಿಕ ಕಿರುಕುಳದಿಂದ ಬೇಸತ್ತು ಯುವಕನ ಜನನಾಂಗ ಕತ್ತರಿಸಿದ ಮಹಿಳೆ
ಲೈಂಗಿಕ ಕಿರುಕುಳದಿಂದ ರೋಸಿಹೋಗಿ ಇಬ್ಬರ ಸಹಾಯದಿಂದ 27 ವರ್ಷದ ಯುವಕನ ಜನನಾಂಗ ಕತ್ತರಿಸಿದ ಮಹಿಳೆಯನ್ನು ಥಾಣೆಯ ಪೊಲೀಸರು ಇಂದು ಬಂಧಿಸಿದ್ದಾರೆ.
ಮುಂಬೈ: ಲೈಂಗಿಕ ಕಿರುಕುಳದಿಂದ ರೋಸಿಹೋಗಿ ಇಬ್ಬರ ಸಹಾಯದಿಂದ 27 ವರ್ಷದ ಯುವಕನ ಜನನಾಂಗ ಕತ್ತರಿಸಿದ ಮಹಿಳೆಯನ್ನು ಥಾಣೆಯ ಪೊಲೀಸರು ಇಂದು ಬಂಧಿಸಿದ್ದಾರೆ.
ಮಾನ್ಪಾಡಾ ಪ್ರದೇಶದ ನಂದಿವಾಲಿಯಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಜನನಾಂಗ ಕತ್ತರಿಸಿಕೊಂಡ ಯುವಕ ಹಾಗೂ ಆ ಮಹಿಳೆ ಇಬ್ಬರೂ ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಆದರೆ, ಅವರಿಬ್ಬರ ಗುರುತನ್ನು ಬಿಟ್ಟುಕೊಟ್ಟಿಲ್ಲ.
ಕಳೆದ ಕೆಲವು ವಾರಗಳಿಂದ ಅಶ್ಲೀಲ ಶಬ್ದಗಳಿಂದ ನಿಂದಿಸುತ್ತಿದ್ದ ಅದ್ದಕ್ಕಾಗಿ ಈ ಕೃತ್ಯವೆಸಗಿದ್ದಾಗಿ ಮಹಿಳೆ ಹೇಳಿಕೆ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.