ಕೊಲ್ಕತ್ತಾ: ಪಶ್ಚಿಮ ಬಂಗಾಳ ರಾಜಧಾನಿ ಕೊಲ್ಕತ್ತಾದಲ್ಲಿನ ಮೆಟ್ರೋ ರೈಲೊಂದರ ಹವಾನಿಯಂತ್ರಿತ ಕೋಚಿನ ಒಳಗಡೆ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಟ್ರೋ ರೈಲಿನ ಸಂಚಾರದಲ್ಲಿ ಇಂದು ಸಂಜೆ ಕೆಲಕಾಲ ವ್ಯತ್ಯಯ ಉಂಟಾಯಿತು.
ರಬೀಂದ್ರ ಸದನ್ ಹಾಗೂ ಮೈದಾನ ನಡುವಿನ ಮಾರ್ಗದ ರೈಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಕೊಲ್ಕತ್ತಾ ವಿಪತ್ತು ನಿರ್ವಹಣಾ ಪೊಲೀಸರು ಬೆಂಕಿಯನ್ನು ನಂದಿಸಿದ್ದು, ಪ್ರಯಾಣಿಕರನ್ನು ಸುರಕ್ಷಿತವಾಗಿ ಪಾರು ಮಾಡಲಾಗಿದೆ ಎಂದು ಕೊಲ್ಕತ್ತಾ ಮೆಟ್ರೋದ ಅಧಿಕಾರಿಗಳು ತಿಳಿಸಿದ್ದಾರೆ.
ರೈಲು ಫ್ಲಾಟ್ ಫಾರಂನಿಂದ ನಿರ್ಗಮಿಸಿದ ಕೂಡಲೇ ಹೊಗೆ ಕಾಣಿಸಿಕೊಂಡಿತು. ಬೆಂಕಿಯಿಂದಾಗಿಯೇ ಈ ಹೊಗೆ ಕಾಣಿಸಿಕೊಂಡಿರುವುದನ್ನು ಅರಿತು ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಯಿತು.
ನಂತರ ಬೆಂಕಿಯನ್ನು ನಂದಿಸಲಾಗಿದ್ದು, ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಯಾವುದೇ ಹಾನಿಯಾಗಿಲ್ಲ ಎಂದು ಮೆಟ್ರೋ ರೈಲು ಸಿಪಿಆರ್ ಓ ಇಂದ್ರಾಣಿ ಮುಖರ್ಜಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics