ದೇಶ

ಲೋಕಸಭೆಯಲ್ಲಿ ಐತಿಹಾಸಿಕ ತ್ರಿವಳಿ ತಲಾಕ್ ನಿಷೇಧ ಮಸೂದೆ ಅಂಗೀಕಾರ

Lingaraj Badiger
ನವದೆಹಲಿ: ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣೆಗೆ ಒತ್ತು ನೀಡುವ ಐತಿಹಾಸಿಕ ತ್ರಿವಳಿ ತಲಾಕ್ ಮಸೂದೆಯನ್ನು ಗುರುವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.
ಇಂದು ಬೆಳಗ್ಗೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ತ್ರಿವಳಿ ತಲಾಕ್ ಮಸೂದೆಯನ್ನು ಮಂಡಿಸಿದರು. ಸುದೀರ್ಘ ಚರ್ಚೆಯ ನಂತರ ವಿಧೇಯಕವನ್ನು ಮತಕ್ಕೆ ಹಾಕಲಾಯಿತು. ವಿಧೇಯಕ ಪರವಾಗಿ 245 ಮತ ಹಾಗೂ ವಿಧೇಯಕದ ವಿರುದ್ಧವಾಗಿ ಕೇವಲ 11 ಮತ ಚಲಾವಣೆಯಾದವು
ಚರ್ಚೆ ವೇಳೆ ಕಾಂಗ್ರೆಸ್‌ ಮತ್ತು ಎಐಎಡಿಎಂಕೆ, ತೃಣಮೂಲ ಕಾಂಗ್ರೆಸ್‌ ಮತ್ತು ಆರ್‌ಜೆಡಿ ಸದಸ್ಯರು ಸಭಾತ್ಯಾಗ ಮಾಡಿದರು. 
ಇದಕ್ಕು ಮುನ್ನ ನಡೆದ ಚರ್ಚೆಯಲ್ಲಿ ತ್ರಿವಳಿ ತಲಾಖೆ ಮಸೂದೆಯಲ್ಲಿ ಕೆಲವು ಅಂಶಗಳು ಅಸಾಂವಿಧಾನಿಕವಾಗಿವೆ. ಈ ಕರಡು ಕಾನೂನನ್ನು ಇನ್ನಷ್ಟು ಆಳವಾಗಿ ಅವಲೋಕಿಸಬೇಕಾದ ಅಗತ್ಯವಿದೆ. ಹೀಗಾಗಿ ಮುಸ್ಲಿಂ ಮಹಿಳೆಯರ ವೈವಾಹಿಕ ಹಕ್ಕುಗಳ ರಕ್ಷಣೆ ಮಸೂದೆ (ತ್ರಿವಳಿ ತಲಾಕ್‌ ಮಸೂದೆ) ಯನ್ನು ಎರಡೂ ಸದನಗಳ ಜಂಟಿ ಆಯ್ಕೆ ಸಮಿತಿಗೆ ಉಲ್ಲೇಖಿಸಬೇಕು. ಇದರಲ್ಲಿ ಒಳಗೊಂಡಿರುವ ಅಸಾಂವಿಧಾನಿಕ ಅಂಶಗಳನ್ನು ಮತ್ತೊಮ್ಮೆ ಅವಲೋಕಿಸಬೇಕೆಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು.
ಸುಪ್ರೀಂ ಕೋರ್ಟ್ ತ್ರಿವಳಿ ತಲಾಕ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದ್ದು, ಅದನ್ನು ಕಾನೂನಾತ್ಮಕವಾಗಿ ಸಂಪೂರ್ಣ ತೆಗೆದು ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ ತ್ರಿವಳಿ ತಲಾಕ್ ತಿದ್ದುಪಡಿ ಮಸೂದೆಯನ್ನು ಕಳೆದ ಡಿಸೆಂಬರ್ ನಲ್ಲಿ ಲೋಕಸಭೆಯಲ್ಲಿ ಅಂಗೀಕರಿಸಿತ್ತು. ಆದರೆ, ರಾಜ್ಯಸಭೆಯಲ್ಲಿ ಅನುಮೋದನೆ ಸಿಗದ ಕಾರಣ ಕಾಯ್ದೆಯಾಗಿ ರೂಪಗೊಂಡಿರಲಿಲ್ಲ. ಆದ್ದರಿಂದ, ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೆ ತಂದಿತ್ತು. ಸುಗ್ರಿವಾಜ್ಞೆಗೂ ಎರಡೂ ಸದನಗಳ ಒಪ್ಪಿಗೆ ಬೇಕಾದ ಕಾರಣ ಇಂದು ಮತ್ತೆ ಲೋಕಸಭೆಯಲ್ಲಿ ಮಂಡಿಸಿ ಅಂಗೀಕರಿಸಲಾಗಿದೆ.
SCROLL FOR NEXT