ಅರವಿಂದ್ ಕೇಜ್ರಿವಾಲ್ 
ದೇಶ

ನವದೆಹಲಿ: ಎಲ್ಲರೂ ಒಟ್ಟಾಗಿ ಕೆಮ್ಮುವ ಮೂಲಕ ಕೇಜ್ರಿವಾಲ್ ಗೆ ಸಭಿಕರಿಂದ ಅವಮಾನ!

ಕಾರ್ಯಕ್ರಮವೊಂದರಲ್ಲಿ ಮಾತನಾಡಲು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಎದ್ದು ನಿಂತ ಕೂಡಲೇ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರು ಒಟ್ಟಿಗೆ ಕೆಮ್ಮುವ ...

ನವದೆಹಲಿ: ಕಾರ್ಯಕ್ರಮವೊಂದರಲ್ಲಿ ಮಾತನಾಡಲು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಎದ್ದು ನಿಂತ ಕೂಡಲೇ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರು ಒಟ್ಟಿಗೆ ಕೆಮ್ಮುವ ಮೂಲಕ ಅವರಿಗೆ ಅಪಮಾನ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಮಾತನಾಡಲು ಎದ್ದು ನಿಂತ ಸಿಎಂ ಸುಮ್ಮನಿರುವಂತೆ ಎಲ್ಲರಲ್ಲೂ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಸಭೆಯಲ್ಲಿ ಭಾಗವಗಹಿಸಿದವರು ಅದನ್ನು ಮುಂದುವರಿಸಿದರು, ಈ ನಡುವೆ ಮಧ್ಯ ಪ್ರವೇಶಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಮುಖ್ಯಮಂತ್ರಿಗಳ ಭಾಷಣಕ್ಕೆ ಅವಕಾಶ ಮಾಡಿಕೊಡುವಂತೆ ಹೇಳಿದರು. 
ಇದೊಂದು ಸರ್ಕಾರಿ ಕಾರ್ಯಕ್ರಮ, ದಯಮಾಡಿ ಎಲ್ಲರೂ ನಿಶ್ಯಬ್ದವಾಗಿರಿ ಎಂದು ಮನವಿ ಮಾಡಿದರು, ಅಣಕದಿಂದ ಕೇಜ್ರಿವಾಲ್ ಅವರನ್ನು ರಕ್ಷಿಸಲು ಗಡ್ಕರಿ ಬರಬೇಕಿತ್ತು.
ನಮಾಮಿ ಗಂಗೆ ಯೋಜನೆಯಡಿ ಯಮುನಾ ನದಿ ಪುನರುಜ್ಜೀವನಕ್ಕಾಗಿ ಗುರುವಾರ 11 ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಕೇಂದ್ರ ಸಚಿವ ನಿತಿನ್ ಗಡ್ಕರಿ ಯೋಜನೆಗೆ ಚಾಲನೆ ನೀಡಿದರು. 
ಕೆಮ್ಮಿನ ಸಮಸ್ಯೆಯಿಂದ ಬಳಲುತ್ತಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಚಿಕಿತ್ಸೆಗಾಗಿ ಹಲವು ಬಾರಿ ಬೆಂಗಳೂರಿಗೆ ಬಂದಿದ್ದುಂಟು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT