ನವದೆಹಲಿ: ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ನಂತಹ ಚಿತ್ರಗಳಲ್ಲಿ ಆಡಳಿತಾರೂಢ ಬಿಜೆಪಿ ಹಣವನ್ನು ದುರುಪಯೋಗಪಡಿಸುತ್ತಿದೆ. ಇದೊಂದು ಬರೀ ಗಿಮ್ಮಿಕ್ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಆರೋಪಿಸಿದ್ದಾರೆ.
2004ರಿಂದ 2008ರವರೆಗೂ ಮನ್ ಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಅವರ ಮಾಧ್ಯಮ ಸಲಹೆಗಾರರಾಗಿದ್ದ ಸಂಜಯ್ ಬರು ಬರೆದಿರುವ ಕೃತಿ ಆಧರಿತ ದಿ ಅಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ಚಿತ್ರ ಬಿಡುಗಡೆಗೆ ಸಿದ್ಧಗೊಂಡಿದೆ.
ವಿಜಯ್ ರತ್ನಕರ್ ಗುಟ್ಟೆ ನಿರ್ದೇಶಿಸಿರುವ ಈ ಚಿತ್ರದಲ್ಲಿ ಅನುಪಮ್ ಖೇರ್ ಮನಮೋಹನ್ ಸಿಂಗ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅಕ್ಷಯ್ ಖನ್ನಾ ಸಂಜಯ್ ಬರು ಪಾತ್ರ ಮಾಡಿದ್ದಾರೆ. ಜನವರಿ 11 ರಂದು ಈ ಚಿತ್ರ ಬಿಡುಗಡೆಯಾಗಲಿದೆ.