ಭಯೋತ್ಪಾದಕರ ಕುಟುಂಬವನ್ನು ಭೇಟಿ ಮಾಡಿದ ಮೆಹಬೂಬಾ ಮುಫ್ತಿ, ರಾಜ್ಯಪಾಲರು, ಪೊಲೀಸರಿಗೇ ಎಚ್ಚರಿಕೆ! 
ದೇಶ

ಉಗ್ರನ ಕುಟುಂಬವನ್ನು ಭೇಟಿ ಮಾಡಿದ ಮೆಹಬೂಬಾ ಮುಫ್ತಿ, ರಾಜ್ಯಪಾಲರು, ಪೊಲೀಸರಿಗೇ ಎಚ್ಚರಿಕೆ!

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಕುಟುಂಬ ಸದಸ್ಯರನ್ನು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಭೇಟಿ ಮಾಡಿದ್ದಾರೆ.

ಜಮ್ಮು: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಕುಟುಂಬ ಸದಸ್ಯರನ್ನು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಭೇಟಿ ಮಾಡಿದ್ದಾರೆ. 
ಪುಲ್ವಾಮ ಜಿಲ್ಲೆಯಲ್ಲಿ ಭಯೋತ್ಪಾದಕನ ಸಹೋದರಿ ಹಾಗೂ ಆಕೆಯ ಪತಿಯನ್ನು ಪೊಲೀಸರು ಥಳಿಸಿದ್ದರು ಎಂಬ ಆರೋಪ ಕೇಳಿಬಂದಿದ್ದು, ಈ ಬೆನ್ನಲ್ಲೇ  ಮಾಜಿ ಸಿಎಂ ಮೆಹಬೂಬಾ ಮುಫ್ತಿ ಭೇಟಿ ಮಾಡಿದ್ದಾರೆ. 
ಉಗ್ರನ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಮೆಹಬೂಬಾ ಮುಫ್ತಿ, ಪೊಲೀಸರು ಭಯೋತ್ಪಾದಕನ ಸಹೋದರಿಯನ್ನು ಥಳಿಸಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ. ಇದೇ ವೇಳೆ ರಾಜ್ಯಪಾಲರು ಹಾಗೂ ಜಮ್ಮು-ಕಾಶ್ಮೀರದ ಪೊಲೀಸರಿಗೆ ಮೆಹಬೂಬಾ ಮುಫ್ತಿ ಎಚ್ಚರಿಕೆ ನೀಡಿದ್ದು, ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಹೇಳಿದ್ದಾರೆ. 
ಜಮ್ಮು-ಕಾಶ್ಮೀರದ ರಾಜ್ಯಪಾಲರು ಭಯೋತ್ಪಾದಕರ ವಿರುದ್ಧ ಹೋರಾಡುತ್ತಿದ್ದರೆ ಭಯೋತ್ಪಾದಕರ ಕುಟುಂಬ ಸದಸ್ಯರನ್ನು ಏಕೆ ಅದರಲ್ಲಿ ಎಳೆದುತರಬೇಕು ರಾಜ್ಯಪಾಲರು ಹಾಗೂ ಪೊಲೀಸರು ಈ ರೀತಿಯ ಕ್ರಮವನ್ನು ಮುಂದುವರೆಸಿದರೆ ಅದು ಅವರಿಗೆ ಕೆಟ್ಟ ಪರಿಣಾಮಗಳನ್ನು ಬೀರಲಿದೆ ಎಂದು ಮುಫ್ತಿ ಎಚ್ಚರಿಕೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಮೈಸೂರು ದಸರಾ ವೇದಿಕೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಎಡವಟ್ಟು; ಸಿಎಂ ಡಿಕೆಶಿ ಪತ್ನಿ ಹೆಸರು ಹೇಳುವಾಗ ಗೊಂದಲ! Video

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ