ಶಶಿ ತರೂರ್ 
ದೇಶ

ರಾಹುಲ್ ಗಾಂಧಿಗೆ ಅತ್ಯುತ್ತಮ ಪ್ರಧಾನಿಯಾಗುವ ಗುಣಗಳಿವೆ: ಶಶಿ ತರೂರ್

ಒಬ್ಬ ಅತ್ಯುತ್ತಮ ಪ್ರಧಾನಿಯಾಗುವ ಗುಣಗಳು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಇದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್...

ನವದೆಹಲಿ: ಒಬ್ಬ ಅತ್ಯುತ್ತಮ ಪ್ರಧಾನಿಯಾಗುವ ಗುಣಗಳು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಇದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಭಾನುವಾರ ಹೇಳಿದ್ದಾರೆ.
2019ರ ಲೋಕಸಭೆ ಚುನಾವಣೆಯ ನಂತರವೇ ಕಾಂಗ್ರೆಸ್ ಮಿತ್ರ ಪಕ್ಷಗಳೊಂದಿಗೆ ಚರ್ಚಿಸಿ ಒಮ್ಮತದಿಂದ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ರಾಹುಲ್ ಗಾಂಧಿ ನಮ್ಮ ನಾಯಕ. ಅದರ ಅರ್ಥ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದರೆ ಅವರೇ ಪ್ರಧಾನಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಸಮ್ಮಿಶ್ರ ಸರ್ಕಾರ ರಚಿಸುವ ಪರಿಸ್ಥಿತಿ ನಿರ್ಮಾಣವಾದರೆ ಮಿತ್ರ ಪಕ್ಷಳೊಂದಿಗೆ ಚರ್ಚಿಸಿ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಾಗುತ್ತದೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತರೂರ್ ತಿಳಿಸಿದ್ದಾರೆ.
ಸ್ಥಾಪಿತ ಪ್ರಕ್ರಿಯೆಯ ಮೂಲಕ ಮತ್ತು ಸಂಪ್ರದಾಯದಂತೆ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿವೆ ಎಂದು ತರೂರ್ ಹೇಳಿದ್ದಾರೆ.
ದೇಶದಲ್ಲಿ ಕಾಂಗ್ರೆಸ್ ಒಂದೇ ಪರ್ಯಾಯ ಪಕ್ಷ ಎಂಬುದು ಇತ್ತೀಚಿನ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ ಎಂದು ಮಾಜಿ ಕೇಂದ್ರ ಸಚಿವ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ