ಸಾಂದರ್ಭಿಕ ಚಿತ್ರ 
ದೇಶ

ನಾಳೆ ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಮಂಡನೆ, ಕಾಂಗ್ರೆಸ್ ವಿರೋಧ

ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣೆಗೆ ಒತ್ತು ನೀಡುವ ತ್ರಿವಳಿ ತಲಾಖ್ ಮಸೂದೆಯನ್ನು ಸೋಮವಾರ...

ನವದೆಹಲಿ: ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣೆಗೆ ಒತ್ತು ನೀಡುವ ತ್ರಿವಳಿ ತಲಾಖ್ ಮಸೂದೆಯನ್ನು ಸೋಮವಾರ ರಾಜ್ಯಸಭೆಯಲ್ಲಿ ಮಂಡಿಸಲಾಗುತ್ತಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸುವುದಾಗಿ ಕಾಂಗ್ರೆಸ್ ತಿಳಿಸಿದೆ.
ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರವಾಗಿರುವ ತ್ರಿವಳಿ ತಲಾಖ್ ಮಸೂದೆಯನ್ನು ನಾಳೆ ರಾಜ್ಯಸಭೆಯಲ್ಲಿ ಸರ್ಕಾರ ಮಂಡಿಸುತ್ತಿದ್ದು, ಎಲ್ಲರೂ ಸದನದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಬಿಜೆಪಿ ವಿಪ್ ಜಾರಿ ಮಾಡಿದೆ.
ತ್ರಿವಳಿ ತಲಾಖ್ ಮಸೂದೆಗೆ ಕೆಲವು ತಿದ್ದುಪಡಿ ತರಬೇಕು. ಈಗ ಇರುವ ಸ್ಥಿತಿಯಲ್ಲಿಯೇ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲು ನಾನು ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಹೇಳಿದ್ದಾರೆ.
ಕಳೆದ ಗುರುವಾರ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಲೋಕಸಭೆಯಲ್ಲಿ ತ್ರಿವಳಿ ತಲಾಕ್ ಮಸೂದೆಯನ್ನು ಮಂಡಿಸಿದ್ದರು. ಸುದೀರ್ಘ ಚರ್ಚೆಯ ನಂತರ ವಿಧೇಯಕವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ.
ತ್ರಿವಳಿ ತಲಾಖೆ ಮಸೂದೆಯಲ್ಲಿ ಕೆಲವು ಅಂಶಗಳು ಅಸಾಂವಿಧಾನಿಕವಾಗಿವೆ. ಈ ಕರಡು ಕಾನೂನನ್ನು ಇನ್ನಷ್ಟು ಆಳವಾಗಿ ಅವಲೋಕಿಸಬೇಕಾದ ಅಗತ್ಯವಿದೆ. ಹೀಗಾಗಿ ಮುಸ್ಲಿಂ ಮಹಿಳೆಯರ ವೈವಾಹಿಕ ಹಕ್ಕುಗಳ ರಕ್ಷಣೆ ಮಸೂದೆ (ತ್ರಿವಳಿ ತಲಾಕ್‌ ಮಸೂದೆ) ಯನ್ನು ಎರಡೂ ಸದನಗಳ ಜಂಟಿ ಆಯ್ಕೆ ಸಮಿತಿಗೆ ಉಲ್ಲೇಖಿಸಬೇಕು. ಇದರಲ್ಲಿ ಒಳಗೊಂಡಿರುವ ಅಸಾಂವಿಧಾನಿಕ ಅಂಶಗಳನ್ನು ಮತ್ತೊಮ್ಮೆ ಅವಲೋಕಿಸಬೇಕೆಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET Paper Leak: ವಿದ್ಯಾರ್ಥಿಗಳ ಪ್ರತಿಭಟನೆ ನಡುವೆಯೇ ಕೇಂದ್ರ ಸರ್ಕಾರದಿಂದ ಮೊದಲ ಕ್ರಮ, ಶಿಕ್ಷಣ ಇಲಾಖೆ ಕಾರ್ಯದರ್ಶಿ ಎತ್ತಂಗಡಿ

INDIA bloc march to Gandhi Smriti: 'ನಮ್ಮನ್ನು ತಡೆಯಲು ಸಾಧ್ಯವೇ ಇಲ್ಲ.. ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಲೇಬೇಕು': ರಾಹುಲ್ ಗಾಂಧಿ

CJP Protest: 'ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗುವ ಸಂಸ್ಕೃತಿ ಸೃಷ್ಟಿಸಬೇಕು': ಕೊನೆಗೂ ಮೌನ ಮುರಿದ Sachin Tendulkar

ಇಂಟರ್ನೆಟ್ ಸೇವೆ ಸ್ಥಗಿತ; ಇಂದು ರಾತ್ರಿ ಪ್ರತಿಭಟನೆ ದಮನ ಮಾಡುವ ಯಾವುದೇ ಯೋಜನೆ ಇಲ್ಲ: ದೆಹಲಿ ಪೊಲೀಸರು

'ಧರ್ಮೇಂದ್ರ ಪ್ರಧಾನ್ ರನ್ನು ವಜಾ ಮಾಡಿ; ಇಲ್ಲದಿದ್ದರೆ ನಿಮ್ಮ ರಾಜೀನಾಮೆಯನ್ನೂ ಕೇಳುತ್ತೇವೆ': ಪ್ರಧಾನಿ ಮೋದಿಗೆ CJP ಮುಖ್ಯಸ್ಥ Abhijeet Dipke ಒತ್ತಾಯ