ದೇಶ

1984ರ ಸಿಖ್ ವಿರೋಧಿ ಗಲಭೆ: ಸಜ್ಜನ್ ಕುಮಾರ್ ನ್ಯಾಯಾಲಯಕ್ಕೆ ಶರಣು

Raghavendra Adiga
ನವದೆಹಲಿ: 1984 ರ ಸಿಖ್ ವಿರೋಧಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಹೈಕೋರ್ಟ್ ನಿಂದ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಮಾಜಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಈಶಾನ್ಯ ದೆಹಲಿಯ ಮಾಂಡೋಲಿ ಜೈಲಿಗೆ ಕುಮಾರ್ ಹಾಜರಾಗಬೇಕೆಂದು ಕಾರ್ಕಾಡೂಮಾ ನ್ಯಾಯಾಲಯ ಆದೇಶಿಸಿತ್ತು. ಈ ವೇಳೆ ಕುಮಾರ್ ತನ್ನನ್ನು  ತಿಹಾರ್ ಜೈಲಿನಲ್ಲಿ ಹೆಚ್ಚಿನ ಭದ್ರತೆಯೊಡನೆ ಇರಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಇದಕ್ಕೆ ಹಿಂದೆ ಸಿಖ್ಖ್ ವಿರೀಧಿ ನರಮೇಧದಲ್ಲಿ ಸಜ್ಜನ್ ಕುಮಾರ್ ಅವರನ್ನು ಖುಲಾಸೆಗೊಳಿಸಿ ವಿಚಾರಣಾಧೀನ ನ್ಯಾಯಾಲಯ ನೀಡಿದ್ದ ತೀರ್ಪನ್ನು ದೆಹಲಿ ಹೈಕೋರ್ಟ್ ರದ್ದುಪಡಿಸಿತ್ತು.ಅಲ್ಲದೆ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿತ್ತು
ಇನ್ನು ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಕುಮಾರ್ ಅರ್ಜಿ ಸಲ್ಲಿಸಿದ್ದು ಇದರ ವಿಚಾರಣೆ ಇನ್ನಷ್ಟೇ ನಡೆಯಬೇಕಿದೆ.
SCROLL FOR NEXT