ಸಂಗ್ರಹ ಚಿತ್ರ 
ದೇಶ

ಕಾಶ್ಮೀರ ಎಂಎಲ್ ಸಿ ಮನೆಯಿಂದಲೇ ಶಸ್ತ್ರಾಸ್ತ್ರ ಹೊತ್ತೊಯ್ದ ಶಂಕಿತ ಉಗ್ರರು!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಆಟಾಟೋಪ ಮಿತಿ ಮೀರಿದ್ದು, ಶ್ರೀನಗರದ ಎಂಎಲ್ ಸಿ ಮನೆಗೆ ನುಗ್ಗಿದ ಉಗ್ರರು ಅವರ ಮನೆಯಲ್ಲಿದ್ದ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿದ್ದಾರೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಆಟಾಟೋಪ ಮಿತಿ ಮೀರಿದ್ದು, ಶ್ರೀನಗರದ ಎಂಎಲ್ ಸಿ ಮನೆಗೆ ನುಗ್ಗಿದ ಉಗ್ರರು ಅವರ ಮನೆಯಲ್ಲಿದ್ದ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿದ್ದಾರೆ.
ಕಾಂಗ್ರೆಸ್ ಎಂಎಲ್ ಸಿ ಮುಜಾಫರ್ ಫರ್ರೇ ಅವರ ಶ್ರೀನಗರದ  ಜವಾಹರ್ ನಗರಲ್ಲಿರುವ ಮನೆಗೆ ನಿನ್ನೆ ತಡರಾತ್ರಿ ಶಂಕಿತ ಉಗ್ರರು ನುಗ್ಗಿದ್ದು, ಈ ವೇಳೆ ಮನೆಯಲ್ಲಿದ್ದ ಸುಮಾರು 4 ಎಕೆ 47 ರೈಫಲ್ ಗಳನ್ನು ಹೊತ್ತೊಯ್ದಿದ್ದಾರೆ ಎಂದು ತಿಳಿದುಬಂದಿದೆ.
ಉಗ್ರರು ಮನೆಗೆ ನುಗ್ಗಿದೆ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಗಳು ಇರಲಿಲ್ಲ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಶ್ರೀನಗರದಾದ್ಯಂತ ಹೈಅಲರ್ಟ್ ಘೋಷಣೆ ಮಾಡಲಾಗಿದ್ದು, ಶ್ರೀನಗರದಿಂದ ಹೊರ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ನಾಕಾಬಂದಿ ಹೇರಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಂತೆಯೇ ಭಾರತೀಯ ಸೇನೆಗೂ ಈ ಸಂಬಂಧ ಮಾಹಿತಿ ರವಾನಿಸಲಾಗಿದೆ.
ಮಿಲಿಟರ್ ಕ್ಯಾಂಪ್ ಬಳಿ ಅವರಿಚಿತ ವ್ಯಕ್ತಿಗಳ ಸುಳಿದಾಟ
ಇನ್ನು ಕಾಶ್ಮೀರದ ರತ್ನುಚಕ್ ಮಿಲಿಯರಿ ಕ್ಯಾಂಪ್ ಬಳಿ ನಿನ್ನೆ ರಾತ್ರಿ ಸುಮಾರು 2 ಗಂಟೆ ಹೊತ್ತಲ್ಲಿ ಅಪರಿತಕ ವ್ಯಕ್ತಿಗಳು ಸುಳಿದಾಡಿದ್ದರು. ಸುಮಾರು ನಾಲ್ಕು ಮಂದಿಯ ಪೈಕಿ ಇಬ್ಬರು ವ್ಯಕ್ತಿ ಗೇಟ್ ಬಳಿ ಬಂದು ಒಳನುಗ್ಗಲು ಯತ್ನಿಸಿದ್ದರು. ಆದರೆ ಸೈನಿಕರು ಗುಂಡಿನ ದಾಳಿ ಆರಂಭಿಸುತ್ತಿದ್ದಂತೆಯೇ ಎಲ್ಲರೂ ಅಲ್ಲಿಂದ ಪರಾರಿಯಾದರು. ಪ್ರಸ್ತುತ ಪರಾರಿಯಾದ ಅಪರಿಚಿತರಿಗಾಗಿ ಶೋಧ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video