ಸಂಗ್ರಹ ಚಿತ್ರ 
ದೇಶ

ಮೃತದೇಹಗಳನ್ನು ವಶಕ್ಕೆ ಪಡೆಯುವಂತೆ ಶೀಘ್ರದಲ್ಲೇ ಪಾಕ್'ಗೆ ತಿಳಿಸುತ್ತೇವೆ: ಭಾರತೀಯ ಸೇನೆ

ಸೈನಿಕರ ವೇಷ ಧರಿಸಿ ಗಡಿ ನುಸುಳಲು ಯತ್ನಿಸುತ್ತಿದ್ದ ಇಬ್ಬರು ನುಸುಳುಕೋರರನ್ನು ಹತ್ಯೆ ಮಾಡಲಾಗಿತ್ತು, ಮೃತದೇಹಗಳನ್ನು ವಶಕ್ಕೆ ಪಡೆಯುವಂತೆ ಶೀಘ್ರದಲ್ಲಿಯೇ ಪಾಕಿಸ್ತಾನಕ್ಕೆ ತಿಳಿಸಲಾಗುವುದು ಎಂದು ಭಾರತೀಯ ಸೇನೆ ಸೋಮವಾರ ಹೇಳಿದೆ...

ಶ್ರೀನಗರ: ಸೈನಿಕರ ವೇಷ ಧರಿಸಿ ಗಡಿ ನುಸುಳಲು ಯತ್ನಿಸುತ್ತಿದ್ದ ಇಬ್ಬರು ನುಸುಳುಕೋರರನ್ನು ಹತ್ಯೆ ಮಾಡಲಾಗಿತ್ತು, ಮೃತದೇಹಗಳನ್ನು ವಶಕ್ಕೆ ಪಡೆಯುವಂತೆ ಶೀಘ್ರದಲ್ಲಿಯೇ ಪಾಕಿಸ್ತಾನಕ್ಕೆ ತಿಳಿಸಲಾಗುವುದು ಎಂದು ಭಾರತೀಯ ಸೇನೆ ಸೋಮವಾರ ಹೇಳಿದೆ. 
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸೇನಾ ವಕ್ತಾರರು, ನೌಗಾಮ್ ಸೆಕ್ಟರ್ ಬಳಿರುವ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳುತ್ತಿದ್ದ ಇಬ್ಬರು ನುಸುಳುಕೋರರನ್ನು ಹತ್ಯೆ ಮಾಡಲಾಗಿದೆ. ಕತ್ತಲೆಯಿದ್ದ ಕಾರಣ ಇದರ ಲಾಭ ಪಡೆಯಲು ನುಸುಳುಕೋರರು ಯತ್ನ ನಡೆಸಿದ್ದರು. ಇದರಂತೆ ಗಡಿ ನುಸುಳಲು ಯತ್ನಿಸಿದ್ದರು. ಈ ವೇಳೆ ದಿಟ್ಟ ಉತ್ತರವನ್ನು ನೀಡಿದ ಸೇನೆ ಇಬ್ಬರು ನುಸುಳುಕೋರರನ್ನು ಹತ್ಯೆ ಮಾಡಿದೆ ಎಂದು ಹೇಳಿದ್ದಾರೆ. 
ಸ್ಥಳ ಅತ್ಯಂತ ಸೂಕ್ಷ್ಮವಾಗಿದ್ದು, ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಹವಾಮಾನ ವೈಪರೀತ್ಯದಿಂದಾಗಿ ಕೆಲ ನುಸುಳುಕೋರರು ತಪ್ಪಿಸಿಕೊಂಡಿರುವ ಸಾಧ್ಯತೆಗಳಿವೆ. ನುಸುಳುಕೋರರು ಪಾಕಿಸ್ತಾನದ ಸೈನಿಕರಂತೆ ವೇಷಗಳನ್ನು ಧರಿಸಿದ್ದರು. ಇನ್ನೂ ಕೆಲ ನುಸುಳುಕೋರರು ಹಳೆಯ ಭಾರತೀಯ ಸೇನೆಯ ಸಮವಸ್ತ್ರಗಳನ್ನು ಧರಿಸಿದ್ದರು. ನುಸುಳುಕೋರರಿಗೆ ಪಾಕಿಸ್ತಾನ ಸಂಪೂರ್ಣ ಬೆಂಬಲ ನೀಡಿದ್ದು, ಮೃತದೇಹಳನ್ನು ತೆಗೆದುಕೊಂಡು ಹೋಗುವಂತೆ ಅವರಿಗೆ ತಿಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!