ಮೆಟ್ರೋ ಯೋಜನೆಗಳಿಗೆ ಬಜೆಟ್ ನಲ್ಲಿ ಶೇ. 20 ರಷ್ಟು ಅನುದಾನ ಇಳಿಕೆ
ಕೇಂದ್ರಸರ್ಕಾರದ 2018-19ರ ಬಜೆಟ್ ನಲ್ಲಿ ಮೆಟ್ರೋ ರೈಲು ಯೋಜನೆಗಳಿಗಾಗಿ 14, 264.60 ಕೋಟಿ ಮೀಸಲಿಡಲಾಗಿದ್ದು, ಶೇ. 20 ರಷ್ಟು ಕಡಿಮೆ ಮಾಡಲಾಗಿದೆ ಎಂಬಂತಹ ಅಭಿಪ್ರಾಯ ವ್ಯಕ್ತವಾಗಿದೆ.
ನವದೆಹಲಿ: ಕೇಂದ್ರ ಸರ್ಕಾರದ 2018-19ರ ಬಜೆಟ್ ನಲ್ಲಿ ಮೆಟ್ರೋ ರೈಲು ಯೋಜನೆಗಳಿಗಾಗಿ 14, 264.60 ಕೋಟಿ ಮೀಸಲಿಡಲಾಗಿದ್ದು, ಶೇ. 20 ರಷ್ಟು ಕಡಿಮೆ ಮಾಡಲಾಗಿದೆ ಎಂಬಂತಹ ಅಭಿಪ್ರಾಯ ವ್ಯಕ್ತವಾಗಿದೆ.
ನಿನ್ನೆ ಬಜೆಟ್ ಮಂಡಿಸಿದ ಹಣಕಾಸು ಸಚಿವ ಅರುಣ್ ಜೇಟ್ಲಿ ಆರ್ಥಿಕ ಹಾಗೂ ನಗರೀಕರಣದಲ್ಲಿ ಮೂಲಸೌಕರ್ಯ ಬೆಳವಣಿಗೆಯ ಚಾಲಕ ಎಂದು ಬಣ್ಣಿಸಿದ್ದರು. ತಮ್ಮ ಸರ್ಕಾರ ಅವಕಾಶ ಹಾಗೂ ಆದ್ಯತಾ ಸರ್ಕಾರವಾಗಿದೆ ಎಂದು ಹೇಳಿದ್ದರು. ಆದಾಗ್ಯೂ. ದೆಹಲಿ ಮೆಟ್ರೋ ರೈಲು ವಿಸ್ತರಣೆ ಸೇರಿದಂತೆ ಮತ್ತಿತರ ಕಾರ್ಯಗಳಿಗೆ ಆದ್ಯತೆ ನೀಡಿಲ್ಲ ಎಂಬಂತಹ ಮಾತುಗಳು ಕೇಳಿಬರುತ್ತಿವೆ.
ದೆಹಲಿ ಮೆಟ್ರೋ ರೈಲು ವಿಸ್ತರಣೆಗಾಗಿ ಬಜೆಟ್ ನಲ್ಲಿ 50 ಕೋಟಿ ರೂ. ಪ್ರಸ್ತಾಪಿಸಲಾಗಿದೆ. ಆದರೆ, 2017-18ರ ಅವಧಿಯಲ್ಲಿ ಈ ಯೋಜನೆಗಾಗಿ 17 ಸಾವಿರದ 810 ಕೋಟಿ ಮೀಸಲಿಡಲಾಗಿತ್ತು. ಹರಿಯಾಣ, ಉತ್ತರ ಪ್ರದೇಶ ಸೇರಿದಂತೆ ಮೂರನೇ ಹಂತದ ಮೆಟ್ರೋ ರೈಲು ಮಾರ್ಗ ವಿಸ್ತರಣೆಗಾಗಿ ದೆಹಲಿ ಮೆಟ್ರೋ ರೈಲು ನಿಗಮ 44. 816.91 ಕೋಟಿ ರೂಗೆ ಪ್ರಸ್ತಾಪ ಸಲ್ಲಿಸಿತ್ತು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.