ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ವಿದ್ಯಾರ್ಥಿಗಳಿಗಾಗಿ ಪ್ರಧಾನಿ ಮೋದಿ ಬರೆದ 'ಎಕ್ಸಾಂ ವಾರಿಯರ್ಸ್‌' ಪುಸ್ತಕ ಬಿಡುಗಡೆ

ವಿದ್ಯಾರ್ಥಿಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬರೆದ 'ಎಕ್ಸಾಂ ವಾರಿಯರ್ಸ್‌' ಪುಸ್ತಕವನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್....

ಪುಸ್ತಕ ಬಿಡುಗಡೆ ಮಾಡುತ್ತಿರುವ ಕೇಂದ್ರ ಸಚಿವರು
Lingaraj Badiger
Updated On : 3 Feb 2018, 8:11 am
ನವದೆಹಲಿ: ವಿದ್ಯಾರ್ಥಿಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬರೆದ 'ಎಕ್ಸಾಂ ವಾರಿಯರ್ಸ್‌' ಪುಸ್ತಕವನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಶನಿವಾರ ಬಿಡುಗಡೆ ಮಾಡಿದ್ದಾರೆ.
ಪರೀಕ್ಷೆ ಸಂದರ್ಭದಲ್ಲಿ ಅತಿ ಹೆಚ್ಚು ಒತ್ತಡಕ್ಕೆ ಗುರಿಯಾಗುವ ಮಕ್ಕಳ ಒತ್ತಡ ನಿವಾರಿಸಲು ಪ್ರಧಾನಿ ಮೋದಿ ಅವರೇ ಸ್ವತಃ ಪುಸ್ತಕ ಬರೆದಿದ್ದು, ಅದನ್ನು ಇಂದು ಕೇಂದ್ರ ಸಚಿವರು ಬಿಡುಗಡೆ ಮಾಡಿದ್ದಾರೆ.
ಪ್ರಧಾನಿ ಮೋದಿ ಕಳೆದ ವರ್ಷ ತಮ್ಮ 'ಮನ್​ ಕೀ ಬಾತ್' ಕಾರ್ಯಕ್ರಮದಲ್ಲಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಮೇಲೆ ಎಲ್ಲಾ ರೀತಿಯ ಒತ್ತಡಗಳಿರುತ್ತವೆ. ಹೀಗೆ ಒತ್ತಡ ಹಾಗೂ ಇದರಿಂದ ಖಿನ್ನತೆಗೊಳಗಾಗುವ ಮಕ್ಕಳಿಗೆ ಹಲವು ಸಲಹೆಗಳನ್ನು ನೀಡಿದ್ದರು.

Advertisement

Advertisement

ಮೋದಿ ಮನದ ಮಾತು ಇದೀಗ ಪುಸ್ತಕ ರೂಪದಲ್ಲಿ ಪ್ರಕಟಗೊಂಡಿದ್ದು, ಈ ಪುಸ್ತಕದಲ್ಲಿ ಸರಳ ಹಾಗೂ ವ್ಯಾವಹಾರಿಕ ಸಲಹೆ ನೀಡುವುದರೊಂದಿಗೆ, ಖುದ್ದು ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಪರೀಕ್ಷೆಯನ್ನು ಹೇಗೆ ಎದುರಿಸಬೇಕೆಂಬುದನ್ನು ಮಕ್ಕಳಿಗೆ ತಿಳಿಸಿಕೊಟ್ಟಿದ್ದಾರೆ.
ಬೋಧನೆ, ಪ್ರಾಯೋಗಿಕ ಮತ್ತು ಚಿಂತನೆಗೆ-ಪ್ರಚೋದಿಸುವ ರೀತಿಯಲ್ಲಿ ಈ ಪುಸ್ತಕವನ್ನು ರೂಪಿಸಲಾಗಿದ್ದು, ಈಗ ಬಿಡುಗಡೆಗೊಂಡ ಪುಸ್ತಕ ಆಂಗ್ಲಾ ಭಾಷೆಯಲ್ಲಿ ಮಾತ್ರ ಲಭ್ಯವಿದ್ದು ಮುಂದಿನ ದಿನಗಳಲ್ಲಿ ಪ್ರಾದೇಶಿಕ ಭಾಷೆಗೂ ಈ ಪುಸ್ತಕವನ್ನು ಭಾಷಾಂತರ ಮಾಡಲಾಗುತ್ತದೆ ಎಂದು ಪ್ರಕಾಶಕ ಪೆಂಗ್ವಿನ್‌ ಇಂಡಿಯಾ ಹೇಳಿಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments