ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ: 5 ವರ್ಷದ ಮಗಳೊಂದಿಗೆ ಕೆರೆಗೆ ಜಿಗಿದ ದಂಪತಿ, ಮೂವರು ಸಾವು

ಐದು ವರ್ಷದ ಮಗಳೊಂದಿಗೆ ದಂಪತಿ ಕೆರೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ....

ನಾಗ್ಪುರ: ಐದು ವರ್ಷದ ಮಗಳೊಂದಿಗೆ ದಂಪತಿ ಕೆರೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ರಾಮನಗರ ಸಮೀಪದ ಹನುಮಾನ್ ದೇವಸ್ಥಾನದ ನಿವಾಸಿಗಳಾದ ನಿಲೇಶ್ ಶಿಂದೆ(35), ಪತ್ನಿ ರೂಪಾಲಿ(32) ಹಾಗೂ ಪುತ್ರಿ ರುಹಿ ಎಂದು ಗುರುತಿಸಲಾಗಿದೆ.
ದಂಪತಿ ಇಂದು ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಕೆರೆಗೆ ಜಿಗಿದಿರುವ ಸಾಧ್ಯತೆ ಇದ್ದು, ನಮಗೆ 8 ಗಂಟೆಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದಂಪತಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮೃತದೇಹಗಳನ್ನು ಕೆರೆಯಿಂದ ಹೊರಗೆ ತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?