ಮೆಹಬೂಬಾ ಮುಫ್ತಿ 
ದೇಶ

ಕಾಶ್ಮೀರವನ್ನು ಉಳಿಸುವುದಕ್ಕಾಗಿ ನರಕಕ್ಕೆ ಹೋಗುವುದಕ್ಕೂ ಸಿದ್ಧ: ಮೆಹಬೂಬಾ ಮುಫ್ತಿ

ಪಿಡಿಪಿ-ಬಿಜೆಪಿ ಮೈತ್ರಿಯನ್ನು ದುಷ್ಟಶಕ್ತಿಯೊಂದಿಗಿನ ಒಪ್ಪಂದ (ಡೀಲ್ ವಿತ್ ಡೆವಿಲ್) ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಹೇಳಿದ್ದು,

ಪಿಡಿಪಿ-ಬಿಜೆಪಿ ಮೈತ್ರಿಯನ್ನು ದುಷ್ಟಶಕ್ತಿಯೊಂದಿಗಿನ ಒಪ್ಪಂದ (ಡೀಲ್ ವಿತ್ ಡೆವಿಲ್) ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಹೇಳಿದ್ದು, ಪ್ರತಿಪಕ್ಷ ನಾಯಕನ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ, ಕಾಶ್ಮೀರವನ್ನು ಉಳಿಸುವುದಕ್ಕಾಗಿ ನಾನು ನರಕಕ್ಕೆ ಹೋಗುವುದನ್ನು ಒಪ್ಪಿಕೊಳ್ಳುವುದಕ್ಕೂ ಸಿದ್ಧ ಎಂದು ಹೇಳಿದ್ದಾರೆ. 
ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ವಿರುದ್ಧ ವಾಗ್ದಾಳಿ ನಡೆಸಿದ್ದ  ಓಮರ್ ಅಬ್ದುಲ್ಲಾ, ಬಿಜೆಪಿ ಹಾಗೂ ಪಿಡಿಪಿ ನಡುವಿನ ಒಪ್ಪಂದ ನನಗೆ ಡೀಲ್ ವಿತ್ ಡೆವಿಲ್ ನಂತೆ ಕಾಣಿಸುತ್ತಿದೆ. ಕಾಶ್ಮೀರದಲ್ಲಿ ಅದೇ ಮಾದರಿಯ ಪರಿಸ್ಥಿತಿ ಉಂಟಾಗಿದೆ ಎಂದು ಓಮರ್ ಅಬ್ದುಲ್ಲಾ ಹೇಳಿದ್ದರು. 
ಇದೇ ವೇಳೆ ಭದ್ರತಾ ಸಿಬ್ಬಂದಿಗಳು 3 ಜನರನ್ನು ಹತ್ಯೆ ಮಾಡಿರುವುದರ ಬಗ್ಗೆ ಎಸ್ಐಟಿ ತನಿಖೆ ನಡೆಸಬೇಕೆಂದು ಓಮರ್ ಅಬ್ದುಲ್ಲಾ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕಿಕ್ರಿಯೆ ನೀಡಿರುವ ಮೆಹಬೂಬಾ ಮುಫ್ತಿ ಕಾಶ್ಮೀರವನ್ನು ಉಳಿಸುವುದಕ್ಕಾಗಿ ನರಕಕ್ಕೆ ಹೋಗುವುದಕ್ಕೂ ಸಿದ್ಧ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!