ಬಿಜೆಪಿ ಸಂಸದ ಹುಕುಮ್ ಸಿಂಗ್ ವಿಧಿವಶ
ದೀರ್ಘಕಾಲದ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಬಿಜೆಪಿ ಹಿರಿಯ ಮುಖಂಡ, ಸಂಸದ ಹುಕುಮ್ ಸಿಂಗ್ ವಿಧಿವಶರಾಗಿದ್ದಾರೆ...
ನವದೆಹಲಿ: ದೀರ್ಘಕಾಲದ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಬಿಜೆಪಿ ಹಿರಿಯ ಮುಖಂಡ, ಸಂಸದ ಹುಕುಮ್ ಸಿಂಗ್ ವಿಧಿವಶರಾಗಿದ್ದಾರೆ.
79 ವರ್ಷದ ಹುಕುಮ್ ಸಿಂಗ್ ಅವರು ಕಳೆದ ಒಂದು ತಿಂಗಳಿನಿಂದ ನೋಯ್ಡಾದ ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಳೆದ ರಾತ್ರಿ ವಿಧಿವಶರಾಗಿದ್ದಾರೆ.
ಹುಕುಮ್ ಸಿಂಗ್ ಉತ್ತರ ಪ್ರದೇಶದ ಕೈರಾನಾ ಸಂಸದೀಯ ಕ್ಷೇತ್ರದಿಂದ ಪ್ರತಿನಿಧಿಸುತ್ತಿದ್ದರು. ಹುಕುಮ್ ಸಿಂಗ್ ಅವರು ಮೂಲತಃ ಕಾಂಗ್ರೆಸಿಗರಾಗಿದ್ದರು. 1996ರಲ್ಲೇ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಹಿರಿಯ ಮುಖಂಡನ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.