ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ (ಸಾಂದರ್ಭಿಕ ಚಿತ್ರ) 
ದೇಶ

ನಾಗ ಒಪ್ಪಂದ ಏನಾಯ್ತು :ಪ್ರಧಾನಿ ಮೋದಿ ಮಾತಿಗೆ ಯಾವುದೇ ಅರ್ಥ ಇರಲ್ಲ: ರಾಹುಲ್ ಗಾಂಧಿ

ಪ್ರಧಾನಮಂತ್ರಿ ನರೇಂದ್ರಮೋದಿ 2015ರಲ್ಲಿ ನಾಗ ಬಂಡುಕೋರರೊಂದಿಗೆ ಮಾಡಿಕೊಂಡಿದ್ದ ಶಾಂತಿ ಒಪ್ಪಂದ ಏನಾಯ್ತು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ನವದೆಹಲಿ: ಪ್ರಧಾನಮಂತ್ರಿ ನರೇಂದ್ರಮೋದಿ 2015ರಲ್ಲಿ ನಾಗ ಬಂಡುಕೋರರೊಂದಿಗೆ ಮಾಡಿಕೊಂಡಿದ್ದ ಶಾಂತಿ ಒಪ್ಪಂದ ಏನಾಯ್ತು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

2015 ಆಗಸ್ಟ್ ರಂದು ಪ್ರಧಾನಿ ನರೇಂದ್ರಮೋದಿ ನಾಗ ಒಪ್ಪಂದ ಮಾಡಿಕೊಳ್ಳುವ ಮೂಲಕ ಪ್ರಧಾನಮಂತ್ರಿ ನರೇಂದ್ರಮೋದಿ ಹೊಸ ಇತಿಹಾಸ ಸೃಷ್ಟಿಸಿದ್ದರು. ಆದರೆ. ಈಗ ಅದು ಏಲ್ಲಿದೆ. ಪ್ರಧಾನಿ ಮೋದಿ ಮಾತಿಗೆ ಯಾವುದೇ ಅರ್ಥವಿರುವುದಿಲ್ಲಾ ಎಂದು ರಾಹುಲ್ ಗಾಂಧಿ ಟ್ವಿಟ್ ಮಾಡಿದ್ದಾರೆ.

ನಾಗ ಬಂಡೋಕೋರರೊಂದಿಗೆ ಒಪ್ಪಂದ ಮಾಡಿಕೊಳ್ಳುವುದಾಗಿ ನರೇಂದ್ರಮೋದಿ ಆಗಸ್ಟ್ 3. 2015ರಂದು  ಘೋಷಿಸಿದ್ದರು. ಈ ಒಪ್ಪಂದ ಈಶಾನ್ಯ ರಾಜ್ಯಗಳಲ್ಲಿ ಸಮಸ್ಯೆಗಳಿಗೆ ಕೊನೆಯಾಗುವ ಬದಲು  ಹೊಸ ಸಮಸ್ಯೆಗಳ ಆರಂಭವಾಗಿದೆ. ಇದು ಧೀರ್ಘಕಾಲ ಉಳಿಯುವಂತಹದ್ದಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಫೆ.27ರಂದು ನಾಗಾಲ್ಯಾಂಡ್ ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ  ಮಾಜಿ ಮುಖ್ಯಮಂತ್ರಿ ನೆಪ್ಯೂ ರಿಯಾ ನಾಯಕತ್ವದ ಎನ್ ಡಿಪಿಪಿ ಜೊತೆ ಬಿಜೆಪಿ ಮೈತ್ರಿಗೆ ಮುಂದಾದ್ದ ಬೆನ್ನಲ್ಲೇ ರಾಹುಲ್ ಗಾಂಧಿ ಈ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ.

ಬುಡಕಟ್ಟು ಸಮುದಾಯ, ನಾಗರಿಕ ಸಮಾಜದ ಸಮಸ್ಯೆ ಬಗೆಹರಿಸಿ ನಾಗಾಲ್ಯಾಂಡ್ ನ ರಾಜಕೀಯ ಸಮಸ್ಯೆಯನ್ನು  ಬಗೆಹರಿಸಬೇಕೆಂಬ ಬೇಡಿಕೆಗೆ ಒಪ್ಪಿ. ಆಡಳಿತಾರೂಢ  ಎನ್ ಪಿಎಫ್ ಸೇರಿದಂತೆ 11 ರಾಜಕೀಯ ಪಕ್ಷಗಳು ಚುನಾವಣೆಗೆ ಸ್ಪರ್ಧಿಸದಿರಲು ತೀರ್ಮಾನಿಸಿವೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ