ಮಹಿಳೆಯರು 
ದೇಶ

2005ಕ್ಕೆ ಮುನ್ನ ಜನಿಸಿದ ಹೆಣ್ಣು ಮಕ್ಕಳಿಗೂ ಆಸ್ತಿಯಲ್ಲಿ ಸಮಪಾಲು: ಸುಪ್ರೀಂ

ಹಿಂದೂ ಉತ್ತರಾಧಿಕಾರಿ ಕಾಯ್ದೆ 2005ರ ಪ್ರಕಾರ ಮಹಿಳೆಯರಿಗೂ ಆಸ್ತಿಯಲ್ಲಿ ಸಮಪಾಲು ಪಡೆಯುವ ಹಕ್ಕಿದೆ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ...

ನವದೆಹಲಿ: ಹಿಂದೂ ಉತ್ತರಾಧಿಕಾರಿ ಕಾಯ್ದೆ 2005ರ ಪ್ರಕಾರ ಮಹಿಳೆಯರಿಗೂ ಆಸ್ತಿಯಲ್ಲಿ ಸಮಪಾಲು ಪಡೆಯುವ ಹಕ್ಕಿದೆ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. 
ಪುರುಷರು ಮತ್ತು ಮಹಿಳೆಯರ ಮಧ್ಯೆ ಸಮಾನತೆ ಕಾಯ್ತುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಮಹತ್ವದ ಆದೇಶವನ್ನು ನೀಡಿದ್ದು 2005ರ ಹಿಂದೂ ಉತ್ತರಾಧಿಕಾರಿ ಕಾಯ್ದೆ ಜಾರಿಗೆ ಬರುವುದಕ್ಕೂ ಮುನ್ನ ಅಂದರೆ 2005ಕ್ಕೂ ಮೊದಲೇ ಜನಿಸಿದ ಮಹಿಳೆಯರಿಗೂ ಆಸ್ತಿಯಲ್ಲಿ ಸಮಪಾಲು ಪಡೆಯುವ ಅವಕಾಶವಿದೆ. 
2005ಕ್ಕೂ ಮೊದಲು ಮಹಿಳೆ ಜನಿಸಿದ್ದಳು ಎಂಬ ಕಾರಣಕ್ಕೆ ತವರು ಮನೆ ಆಸ್ತಿಯಲ್ಲಿ ಪಾಲು ನೀಡಲು ನಿರಾಕರಿಸಬಾರದು ಎಂದು ಪೀಠ ಹೇಳಿದೆ. ತಂದೆಯ ಆಸ್ತಿಯಲ್ಲಿ ಸಮಾನ ಪಾಲು ಆಗ್ರಹಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಕರ್ನಾಟಕದ ಬಾಗಲಕೋಟೆಯ ಇಬ್ಬರು ಸೋದರಿಯರು ಪ್ರಕರಣದಲ್ಲಿ ಪೀಠ ಈ ತೀರ್ಪು ನೀಡಿದೆ. ಈ ಸಂಬಂಧ ರಾಜ್ಯ ಹೈಕೋರ್ಟ್ ಆದೇಶವನ್ನು ಸುಪ್ರೀಂ ತಳ್ಳಿಹಾಕಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ: ಇಬ್ಬರಿಗೆ ಗಾಯ, ಇರಾನ್ ರಾಯಭಾರಿಗೆ ಅಜರ್ ಬೈಜಾನ್ ಸಮನ್ಸ್!

T20 World Cup 2026 ಸೆಮಿಫೈನಲ್: ಸ್ಯಾಮ್ಸನ್ ಮಿಂಚಿನ ಅರ್ಧಶತಕ; ಇಂಗ್ಲೆಂಡ್ ಗೆ ಬೃಹತ್ 254 ರನ್ ಟಾರ್ಗೆಟ್ ನೀಡಿದ ಭಾರತ!

T20 World Cup Semi Final 2026: 19 ವರ್ಷಗಳ ಐತಿಹಾಸಿಕ ದಾಖಲೆ ಮುರಿದ ಸಂಜು-ಇಶಾನ್ ಕಿಶಾನ್! Video

T20 World Cup 2026: 2ನೇ ಸೆಮಿಫೈನಲ್; ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್!

ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ದಿಢೀರ್ ರಾಜೀನಾಮೆ; ರವಿಗೆ ಹೆಚ್ಚುವರಿ ಜವಾಬ್ದಾರಿ

SCROLL FOR NEXT