ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿಭಾಗದಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕಿಸ್ತಾನದ ಕ್ರಮ ಕ್ಷಮಿಸಲಾರದು.ಆ ದೇಶದ ಹೇಡಿತನಕ್ಕೆ ನಿನ್ನೆ ನಡೆದಿರುವ ದಾಳಿ ಪೂರವೆಯಂತಿದ್ದು, ಪಾಕಿಸ್ತಾನ ಬೆಲೆ ತೆರಬೇಕಾಗುತ್ತದೆ ಎಂದು ಗೃಹ ಸಚಿವಾಲಯ ರಾಜ್ಯ ಸಚಿವ ಹನ್ಸ್ ರಾಜ್ ಅಯಿರ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಕಳೆದ ರಾತ್ರಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಒಬ್ಬರು ಅಧಿಕಾರಿ, ಮೂವರು ಯೋಧರು ಸೇರಿದಂತೆ ನಾಲ್ವರು ಯೋಧರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಾಕಿಸ್ತಾನ ಸೈನಿಕರ ಗುಂಡು ಹಾಗೂ ಶೆಲ್ ದಾಳಿಯಿಂದಾಗಿ ಜಮ್ಮು , ಸಾಂಬಾ, ಕತ್ವಾ, ರಜೌರಿ, ಪೊಂಚ್ ಸೇರಿದಂತೆ ಅಂತಾರಾಷ್ಟ್ರೀಯ ಗಡಿ ಭಾಗದ ಐದು ಜಿಲ್ಲೆಗಳಲ್ಲಿ ಕಳೆದ ತಿಂಗಳು ಹದಿನೈದು ದಿನಗಳ ಕಾಲ ಶಾಲೆಗಳನ್ನು ಮುಚ್ಚಲಾಗಿತ್ತು.
ಪಾಕಿಸ್ತಾನ ಸೈನಿಕರ ಗುಂಡು ಹಾಗೂ ಶೆಲ್ ದಾಳಿಯಿಂದಾಗಿ ಅಂತಾರಾಷ್ಟ್ರೀಯ ಗಡಿಭಾಗಕ್ಕೆ ಹೊಂದಿಕೊಂಡಂತಿದ್ದ ಎಲ್ಲಾ ಶಾಲೆಗಳನ್ನು ಮೂರು ದಿನಗಳಿಂದ ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.