ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರ: ಗುಂಡಿನ ದಾಳಿಯಲ್ಲಿ ಯುವಕನಿಗೆ ಗಾಯ, ಸೇನೆ ವಿರುದ್ಧ ಎಫ್ಐಆರ್ ದಾಖಲು

ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ಸೋಮವಾರ ಕಲ್ಲು ತೂರಾಟಗಾರರ ಮೇಲೆ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದ್ದು, ಘಟನೆಯಲ್ಲಿ 22 ವರ್ಷದ....

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ಸೋಮವಾರ ಕಲ್ಲು ತೂರಾಟಗಾರರ ಮೇಲೆ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದ್ದು, ಘಟನೆಯಲ್ಲಿ 22 ವರ್ಷದ ಯುವಕ ಗಾಯಗೊಂಡಿದ್ದಾನೆ. ಈ ಸಂಬಂಧ ಭಾರತೀಯ ಸೇನೆಯ 10 ಗರ್ವಾಲ್ ಘಟಕದ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಸೇನಾ ಅಧಿಕಾರಿಗಳ ಪ್ರಕಾರ, ಸೈನಿಕರು ಸ್ವರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ.
ಇಂದು ಬೆಳಗ್ಗೆ ಹವೂರ ಗ್ರಾಮದಲ್ಲಿ ಪ್ರತಿಭಟನಾಕಾರರು ಸೇನೆ ಗಸ್ತು ಪಡೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಪರಿಸ್ಥಿತಿ ನಿಯಂತ್ರಿಸಲು ಸೈನಿಕರು ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದರು. ಘಟನೆಯಲ್ಲಿ ಆರಿಫ್ ಅಹ್ಮದ್ ಎಂಬ ಯುವಕ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 
ಆರಿಫ್ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಗ್ರಾಮದ ನಿವಾಸಿಗಳ ಮೇಲೆ ಸೇನಾ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಮತ್ತು ಆಸ್ತಿ ಹಾನಿಗೊಳಿಸಿದ್ದಾರೆ ಎಂದು ಆರೋಪಿಸಿ ಯುವಕರ ಸೇನೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; 2 ದಿನಗಳ ಡೆಡ್‌ಲೈನ್‌!

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ

ಸ್ಟಿಂಗ್‌ ಆಪರೇಷನ್‌ ರೂವಾರಿ, ರೌಡಿಶೀಟರ್‌ ಫೋಟೋ ರಿಲೀಸ್‌ ಮಾಡಿದ ಕುಮಾರಸ್ವಾಮಿ!

ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಪ್ರಿಯಕರ? ಮನೆ ಮುಂದೆ ಯುವತಿ ಪ್ರತಿಭಟನೆ!-Video