ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾದವ್ ಅವರ (ಸಾಂದರ್ಭಿಕ ಚಿತ್ರ) 
ದೇಶ

ಮಾಣಿಕ್ ಸರ್ಕಾರ್ ನೇತೃತ್ವದ ಭ್ರಷ್ಟ, ಹಿಂಸಾತ್ಮಕ ಸರ್ಕಾರ : ಬಿಜೆಪಿ ಆರೋಪ

ದೇಶದ ಅತ್ಯಂತ ಬಡ ಮುಖ್ಯಮಂತ್ರಿ ಎಂದೇ ಹೆಸರಾಗಿರುವ ತ್ರಿಪುರಾದ ಮಾಣಿಕ್ ಸರ್ಕಾರ್ ನೇತೃತ್ವದ ಸರ್ಕಾರ ಭ್ರಷ್ಟ ಮತ್ತು ಹಿಂಸಾತ್ಮಕ ಸರ್ಕಾರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾದೇವ್ ಆರೋಪಿಸಿದ್ದಾರೆ.

ಅಗರ್ತಲಾ:  ದೇಶದ ಅತ್ಯಂತ ಬಡ ಮುಖ್ಯಮಂತ್ರಿ ಎಂದೇ ಹೆಸರಾಗಿರುವ ತ್ರಿಪುರಾದ ಮಾಣಿಕ್ ಸರ್ಕಾರ್ ನೇತೃತ್ವದ ಸರ್ಕಾರ ಭ್ರಷ್ಟ ಮತ್ತು ಹಿಂಸಾತ್ಮಕ ಸರ್ಕಾರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾದವ್  ಆರೋಪಿಸಿದ್ದಾರೆ.

ತ್ರಿಪುರಾ ರಾಜ್ಯದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮಾಣಿಕ್ ಸರ್ಕಾರ್ ಮಾತ್ರ ಹುದ್ದೆ ಪಡೆದಿದ್ದು ಆ ರಾಜ್ಯದ ಉಳಿದೆಲ್ಲಾ ಜನ ಬಡತನ  ಹಾಗೂ ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

 25 ವರ್ಷಗಳಿಂದ ಸಿಪಿಐಎಂ ನ ದುರಾಡಳಿತದಿಂದ ತ್ರಿಪುರಾ ರಾಜ್ಯದ ಜನತೆ ಬೇಸತ್ತಿದ್ದು, ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ. ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಅಪಾದಿಸಿದ್ದಾರೆ.

ಫೆಬ್ರುವರಿ 18ರಂದು ತ್ರಿಪುರಾ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದೆ. ಮಾರ್ಚ್ 3 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.ಸಿಪಿಐಎಂ ಕಳೆದ 25 ವರ್ಷಗಳಿಂದ ಆಡಳಿತ ನಡೆಸುತ್ತಿದ್ದು, ಮಾಣಿಕ್ ಸರ್ಕಾರ 19 ವರ್ಷಗಳಿಂದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!