ಮೆಹಬೂಬಾ ಮುಫ್ತಿ 
ದೇಶ

ಕಾಶ್ಮೀರದಲ್ಲಿ ಉಗ್ರ ಸಂಘಟನೆ ಸೇರುತ್ತಿರುವ ಯುವಕರ ಸಂಖ್ಯೆ ಶೇ.43ರಷ್ಟು ಹೆಚ್ಚಳ: ಸಿಎಂ ಮುಫ್ತಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಸಂಘಟನೆ ಸೇರುತ್ತಿರುವ ಯುವಕರ ಸಂಖ್ಯೆ ಶೇ.43ರಷ್ಟು ಹೆಚ್ಚಳವಾಗಿದೆ ಎಂದು ಕಣಿವೆ ರಾಜ್ಯದ ಮುಖ್ಯಮಂತ್ರಿ....

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಸಂಘಟನೆ ಸೇರುತ್ತಿರುವ ಯುವಕರ ಸಂಖ್ಯೆ ಶೇ.43ರಷ್ಟು ಹೆಚ್ಚಳವಾಗಿದೆ ಎಂದು ಕಣಿವೆ ರಾಜ್ಯದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಮಂಗಳವಾರ ವಿಧಾನಸಭೆಗೆ ತಿಳಿಸಿದ್ದಾರೆ.
ಸ್ಥಳೀಯ ಯುವಕರು ಉಗ್ರ ಸಂಘಟನೆ ಸೇರಿದ ಕುರಿತ 2010ರಿಂದ ಲಭ್ಯವಿರುವ ಮಾಹಿತಿ ನೀಡಿದ ಸಿಎಂ ಮುಫ್ತಿ, 2017ರಲ್ಲಿ ಒಟ್ಟು 126 ಯುವಕರ ಉಗ್ರ ಸಂಘಟನೆ ಸೇರಿದ್ದಾರೆ. 2016ರಲ್ಲಿ 88 ಯುವಕರು, 2015ರಲ್ಲಿ 66 ಯುವಕರು ಉಗ್ರ ಸಂಘಟನೆ ಸೇರಿದ್ದಾರೆ ಎಂದು ಮೆಹಬೂಬಾ ಮುಫ್ತಿ ಅವರು ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದರು.
ಕಳೆದ ವರ್ಷ ಡಿಸೆಂಬರ್ ನಲ್ಲಿ ಈ ವರ್ಷ ಏಳು ವರ್ಷಗಳಲ್ಲೇ ಅತಿ ಹೆಚ್ಚು ಯುವಕರು ಉಗ್ರ ಸಂಘಟನೆ ಸೇರಿದ್ದಾರೆ ಎಂದು ಪಿಟಿಐ ವರದಿ ಮಾಡಿತ್ತು. ಆದರೆ ಈ ವರದಿಯನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕ ಎಸ್ ಪಿ ವಯಿದ್ ಅವರು ತಳ್ಳಿಹಾಕಿದ್ದರು.
ಇನ್ನು ಕಳೆದ ಮಾರ್ಚ್ ನಲ್ಲಿ ಸಂಸತ್ತಿಗೆ ನೀಡಿದ ಮಾಹಿತಿಯ ಪ್ರಕಾರ, 2011, 2012 ಮತ್ತು 2013ಕ್ಕೆ ಹೋಲಿಸಿದರೆ 2014ರಲ್ಲಿ ಶಸ್ತ್ರಾಸ್ತ್ರ ಕೈಗೆತ್ತಿಕೊಳ್ಳುತ್ತಿರುವ ಕಣಿವೆ ರಾಜ್ಯದ ಯುವಕರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!