ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 
ದೇಶ

ರಾಜಕೀಯ ಅಸ್ಥಿರತೆ: ಮಾಲ್ಡೀವ್ಸ್'ಗೆ ತೆರಳದಂತೆ ಭಾರತೀಯರಿಗೆ ಸರ್ಕಾರ ಸೂಚನೆ

ಅಧ್ಯಕ್ಷ ಅಬ್ದುಲ್ಲಾ ಯಾಮೀನ್ ನೇತೃತ್ವದ ಮಾಲ್ಡೀವ್ಸ್ ಸರ್ಕಾರ ದೇಶದ ಸುಪ್ರೀಂಕೋರ್ಟ್ ವಿರುದ್ಧ ಸಮರ ಸಾರಿದ್ದು, ದ್ವೀಪ ರಾಷ್ಟ್ರದಲ್ಲಿ ಮಿಲಿಟರಿ ಆಡಳಿತ ಜಾರಿಯಾರುವ ಸಾಧ್ಯತೆಗಳು ದಟ್ಟವಾಗುತ್ತಿದ್ದು...

ನವದೆಹಲಿ: ಅಧ್ಯಕ್ಷ ಅಬ್ದುಲ್ಲಾ ಯಾಮೀನ್ ನೇತೃತ್ವದ ಮಾಲ್ಡೀವ್ಸ್ ಸರ್ಕಾರ ದೇಶದ ಸುಪ್ರೀಂಕೋರ್ಟ್ ವಿರುದ್ಧ ಸಮರ ಸಾರಿದ್ದು, ದ್ವೀಪ ರಾಷ್ಟ್ರದಲ್ಲಿ ಮಿಲಿಟರಿ ಆಡಳಿತ ಜಾರಿಯಾರುವ ಸಾಧ್ಯತೆಗಳು ದಟ್ಟವಾಗುತ್ತಿದ್ದು, ಈ ಹಿನ್ನಲೆಯಲ್ಲಿ ಭಾರತೀಯರು ಮಾಲ್ಡೀವ್ಸ್'ಗೆ ತೆರಳದಂತೆ ಸರ್ಕಾರ ಸೂಚನೆ ನೀಡಿದೆ. 
ಮಾಲ್ಡೀವ್ಸ್ ನಲ್ಲಿ ರಾಜಕೀಯ ಅಸ್ಥಿತಿರತೆ ಉಲ್ಭಣಗೊಂಡಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು, ಅಗತ್ಯವಿಲ್ಲದೆ  ಮಾಲ್ಡೀವ್ಸ್'ಗೆ ತೆರಳಲು ನಿರ್ಧರಿಸಿರುವ ಭಾರತೀಯರು ಪ್ರಯಾಣವನ್ನು ಮುಂದೂಡುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಮಾಲ್ಡೀವ್ಸ್ ನಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಹಾಗೂ ಎಲ್ಲಿ ಎದುರಾಗುತ್ತಿರುವ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಕುರಿತು ಭಾರತಕ್ಕೆ ಕಳವಳವುಂಟಾಗಿದ್ದು, ಅಗತ್ಯವಿಲ್ಲದೆ ಮಾಲ್ಡೀವ್ಸ್'ಗೆ ತೆರಳಲು ಸಿದ್ಧತೆ ನಡೆಸಿಕೊಳ್ಳುತ್ತಿರುವ ಭಾರತೀಯರು ತಮ್ಮ ಪ್ರಯಾಣವನ್ನು ಮುಂದೂಡುವಂತೆ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ. 
ಇದಲ್ಲದೆ. ಮಾಲ್ಡೀವ್ಸ್ ನಲ್ಲಿರುವ ಭಾರತೀಯರು ಕೂಡ ಸಾಕಷ್ಟು ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದ್ದು, ಹೆಚ್ಚು ಜನಸಂದಣಿ ಇರುವಂತಹ ಪ್ರದೇಶಗಳಿಗೆ ಹೋಗುವುದನ್ನು ನಿಯಂತ್ರಿಸುವಂತೆ ತಿಳಿಸಲಾಗಿದೆ. ಸಾರ್ವಜನಿಕ ಕೂಟಗಳಿಂದ ಸಾಕಷ್ಟು ದೂರವಿರುವಂತೆ ತಿಳಿಸಲಾಗಿದೆ ಎಂದಿದ್ದಾರೆ. 
ಮಾಲ್ಡೀವ್ಸ್ ನಲ್ಲಿ ಸರ್ಕಾರ ಹಾಗೂ ಸುಪ್ರೀಂಕೋರ್ಟ್ ನಡುವೆ ಹಗ್ಗಜಗ್ಗಾಟ ನಡೆಯುತ್ತಿದ್ದು, ಸೋಮವಾರವಷ್ಟೇ ಮಾಲ್ಡೀವ್ಸ್ ಅಧ್ಯಕ್ಷ ಅಬ್ದುಲ್ಲಾ ಯಾಮೀನ್ ಅವರು 15 ದಿನಗಳ ಮಾಲ್ಡೀವ್ಸ್ ನಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿದ್ದಾರೆ. 
ತುರ್ತುಪರಿಸ್ಥಿತಿ ಘೋಷಣೆ ಮಾಡಿರುವ ಪರಿಣಾಮ ಎಲ್ಲಾ ಮೂಲಭೂತ ಹಕ್ಕುಗಳು ಅಮಾನತುಗೊಳಿಸಲಾಗಿದೆ. ಭದ್ರತಾ ಪಡೆಗಳು ಅಧಿಕಾರಿಗಳನ್ನು ಬಂಧನಕ್ಕೊಳಪಡಿಸುವ ಹಾಗೂ ಹುಡುಕಾಟದ ಕಾರ್ಯದಲ್ಲಿ ತೊಡಗಿದ್ದಾರೆಂದು ಸಂಸತ್ತಿನ ಸದಸ್ಯೆ ಈವಾ ಅಬ್ದುಲ್ಲಾ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ