ಪೂಂಚ್: ಜಮ್ಮು ಮತ್ತು ಕಾಶ್ಮೀರ ಪೂಂಚ್ ಜಿಲ್ಲಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು. ಈ ಹಿನ್ನಲೆಯಲ್ಲಿ ಗಡಿ ಭಾಗದ 60 ಶಾಲೆಗಳನ್ನು ಬಂದ್ ಮಾಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಪೂಂಜ್ ಜಿಲ್ಲೆಯ ಉಪ ಜಿಲ್ಲಾಧಿಕಾರಿ ತರೀಖ್ ಅಹಮದ್ ಜರ್ಗಾರ್ ಅವರು ಮಾತನಾಡಿ, ಬಾಲಾಕೋಟ್ ಸೆಕ್ಟರ್ ಬಳಿ ನಿನ್ನೆ ಭಾರೀ ಗುಂಡಿನ ಚಕಮಕಿಗಳು ನಡೆಯುತ್ತಿದ್ದವು. ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಹಿನ್ನಲೆಯಲ್ಲಿ ಬಾಲಾ ಸೆಕ್ಟರ್'ನ ಗಡಿ ನಿಯಂತ್ರಣ ರೇಖೆಯಿಂದ 5 ಕಿ.ಮೀ ದೂರದಲ್ಲಿರುವ ಎಲ್ಲಾ ಶಾಲೆಗಳನ್ನು ಬಂದ್ ಮಾಡಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಈ ಪ್ರದೇಶದಲ್ಲಿ 60 ಶಾಲೆಗಳಿದ್ದು, ಪರಿಸ್ಥಿತಿಯನ್ನು ಗಮಿನಿಸಿ ಶಾಲೆಯನ್ನು ಆರಂಭಿಸಬೇಕೋ, ಇಲ್ಲವೋ ಎಂಬುದನ್ನು ನಿರ್ಧರಿಸುತ್ತೇವೆಂದು ತಿಳಿಸಿದ್ದಾರೆ.
ಈ ಹಿಂದೆ ಜಮ್ಮು ಮತ್ತು ಕಾಶ್ಮೀರ ರಜೌರಿ ಜಿಲ್ಲೆಯ 84 ಶಾಲೆಗಳನ್ನು ಬಂದ್ ನಿನ್ನೆ ಬಂದ್ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics