ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಈ ವರ್ಷದಿಂದ ವಿದೇಶದಲ್ಲಿ ವೈದ್ಯಕೀಯ ಕೋರ್ಸ್ ಮಾಡಲೂ ನೀಟ್ ಕಡ್ಡಾಯ

ಕೇಂದ್ರ ಸರ್ಕಾರ ಈ ವರ್ಷದಿಂದ ವಿದೇಶದಲ್ಲಿ ವೈದ್ಯಕೀಯ ಕೋರ್ಸ್ ಮಾಡಲೂ ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ....

ಸಾಂದರ್ಭಿಕ ಚಿತ್ರ
Lingaraj Badiger
Updated On : 6 Feb 2018, 8:35 am
ನವದೆಹಲಿ: ಕೇಂದ್ರ ಸರ್ಕಾರ ಈ ವರ್ಷದಿಂದ ವಿದೇಶದಲ್ಲಿ ವೈದ್ಯಕೀಯ ಕೋರ್ಸ್ ಮಾಡಲೂ ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆ(ನೀಟ್)ತೆಗೆದುಕೊಳ್ಳುವುದು ಕಡ್ಡಾಯಗೊಳಿಸಿದೆ.
ಉತ್ತಮ ಗುಣಮಟ್ಟದ ಅರ್ಹ ವಿದ್ಯಾರ್ಥಿಗಳಿಗೆ ವಿದೇಶದ ವಿಶ್ವವಿದ್ಯಾಲಯಗಳಲ್ಲಿ ವೈದ್ಯಕೀಯ ಕೋರ್ಸ್ ಮಾಡುವ ಅವಕಾಶ ಸಿಗಲಿ ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಸ್ತುತ ವಿದೇಶದಲ್ಲಿ ವೈದ್ಯಕೀಯ ಕೋರ್ಸ್ ಮಾಡಿ ಬರುವ ಅಭ್ಯರ್ಥಿಗಳು ಭಾರತೀಯ ವೈದ್ಯಕೀಯ ಮಂಡಳಿ ನಡೆಸುವ ವಿದೇಶಿ ವೈದ್ಯಕೀಯ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾದ ನಂತರ ದೇಶದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಬಹುದಾಗಿದೆ.

Advertisement

Advertisement

ಭಾರತೀಯ ವೈದ್ಯಕೀಯ ಮಂಡಳಿ ನಡೆಸುವ ಪರವಾನಗಿ ಪರೀಕ್ಷೆಯಲ್ಲಿ ಕೇವಲ ಶೇ.10ರಿಂದ ಶೇ.15ರಷ್ಟು ವಿದ್ಯಾರ್ಥಿಗಳು ಮಾತ್ರ ತೇರ್ಗಡೆಯಾಗುತ್ತಿದ್ದು, ಇದು ವಿದೇಶದಲ್ಲಿ ಪಡೆಯುವ ವೈದ್ಯಕೀಯ ಶಿಕ್ಷಣದ ಗುಣಮಟ್ಟವನ್ನು ಸೂಚಿಸುತ್ತದೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳು ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
ಸದ್ಯ ಪಿಯುಸಿಯಲ್ಲಿ ಶೇ.50ರಷ್ಟು ಅಂಕ ಪಡೆದ ಯಾವುದೇ ವಿದ್ಯಾರ್ಥಿ ಭಾರತೀಯ ವೈದ್ಯಕೀಯ ಮಂಡಳಿಯಿಂದ ಅರ್ಹತಾ ಪ್ರಮಾಣಪತ್ರ ಪಡೆದು ವಿದೇಶದಲ್ಲಿ ವೈದ್ಯಕೀಯ ವ್ಯಾಸಂಗ ಮಾಡಬಹುದಾಗಿದೆ. ಪ್ರತಿ ವರ್ಷ ಭಾರತದಿಂದ 6 ರಿಂದ 7 ಸಾವಿರ ವಿದ್ಯಾರ್ಥಿಗಳು ಚೀನಾ, ರಷ್ಯಾ ಸೇರಿದಂತೆ ಹಲವು ದೇಶಗಳಲ್ಲಿ ವೈದ್ಯಕೀಯ ಕೋರ್ಸ್ ಮಾಡಲು ತೆರಳುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments