ಸುಪ್ರೀಂ ಕೋರ್ಟ್ 
ದೇಶ

ನಾವು ತ್ಯಾಜ್ಯ ಸಂಗ್ರಹಿಸುವವರಲ್ಲ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್

ದೇಶಾದ್ಯಂತ ಘನ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಅಸಮರ್ಪಕ ಮಾಹಿತಿಯುಳ್ಳ 845 ಪುಟಗಳ ಪ್ರಮಾಣ ಪತ್ರ ಸಲ್ಲಿಸಿದ್ದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನಗೊಂಡಿದ್ದು...

ನವದೆಹಲಿ: ದೇಶಾದ್ಯಂತ ಘನ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಅಸಮರ್ಪಕ ಮಾಹಿತಿಯುಳ್ಳ 845 ಪುಟಗಳ ಪ್ರಮಾಣ ಪತ್ರ ಸಲ್ಲಿಸಿದ್ದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನಗೊಂಡಿದ್ದು, ನಾವು ತ್ಯಾಜ್ಯ ಸಂಗ್ರಹಿಸುವುದಿಲ್ಲ ಎಂದು ಹೇಳಿದೆ. 
ಕೇಂದ್ರ ಸರ್ಕಾರ ಸಲ್ಲಿಸಿದ್ದ ಅಫಿಡವಿಟ್ ನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಕೋರ್ಟ್ ಎದುರು ಸತ್ವವಿಲ್ಲದ ಅಫಿಡವಿಟ್ ಗಳನ್ನು ಸಲ್ಲಿಸುವಂತಿಲ್ಲ, ನೀವು ಏನನ್ನು ಮಾಡಲು ಯತ್ನಿಸುತ್ತಿದ್ದೀರಿ? ಕೋರ್ಟ್ ಇದರಿಂದ ಸಂತುಷ್ಟಗೊಂಡಿಲ್ಲ, ನೀವು ಅಫಿಡವಿಟ್ ನ್ನು ತಂದು ಸುರಿಯಲು ಯತ್ನಿಸುತ್ತಿದ್ದೀರಿ, ಕೋರ್ಟ್ ಇದನ್ನು ಒಪ್ಪುವುದಿಲ್ಲ, ನಾವು ತ್ಯಾಜ್ಯ ಸಂಗ್ರಹಣೆ ಮಾಡುವುದಿಲ್ಲ ಎಂದು ನ್ಯಾ.ಮದನ್ ಬಿ.ಲೋಕುರ್ ಹಾಗೂ ದೀಪಕ್ ಗುಪ್ತ ಪೀಠ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. 
ಇದೇ ವೇಳೆ 2016ರ ಘನ ತ್ಯಾಜ್ಯ ನಿರ್ವಹಣೆ ನಿಯಮಗಳಿಗೆ ಸಂಬಂಧಿಸಿದಂತೆ ಕೇಂದ್ರಾಡಳಿತ ಪ್ರದೇಶಗಳು ಹಾಗೂ ರಾಜ್ಯಗಳು ರಾಜ್ಯ ಮಟ್ಟದ ಸಲಹಾ ಮಂಡಳಿಗಳನ್ನು ರಚಿಸಿವೆಯೇ ಎಂಬುದಕ್ಕೆ ಸಂಬಂಧಿಸಿದಂತೆ ಮೂರು ವಾರಗಳಲ್ಲಿ ಚಾರ್ಟ್ ನ್ನು ಸಲ್ಲಿಸಬೇಕೆಂದು ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!