ಒಡಿಶಾ: ಪ್ರಥ್ವಿ-2 ಪರೀಕ್ಷಾರ್ಥ ಉಡಾವಣೆ ಯಶಸ್ವಿ
ಭೂಮಿಯ ಮೇಲ್ಮೈನಿಂದ ಭೂ ಮೇಲ್ಮೈಗೆ ಹಾರಬಲ್ಲ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಥ್ವಿ 2ನ್ನು ಇಂದು ಒಡಿಶಾ ಕರಾವಳಿಯಿಂದ ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ.
ಬಾಲಸೂರ್ (ಒಡಿಶಾ): ಭೂಮಿಯ ಮೇಲ್ಮೈನಿಂದ ಭೂ ಮೇಲ್ಮೈಗೆ ಹಾರಬಲ್ಲ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಥ್ವಿ 2ನ್ನು ಇಂದು ಒಡಿಶಾ ಕರಾವಳಿಯಿಂದ ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ. 350 ಕಿ.ಮೀ ದೂರದ ಗುರಿ ತಲುಪಬಲ್ಲ ಸಾಮರ್ಥ್ಯ ಹೊಂದಿರುವ ಸ್ವದೇಶೀ ನಿರ್ಮಿತ ಕ್ಷಿಪಣಿಯನ್ನು ಒಡಿಶಾದ ಬಾಲಸೂರ್ ಜಿಲ್ಲೆಯ ಅಬ್ದುಲ್ ಕಲಾಂ ದ್ವೀಪದಲ್ಲಿ ಪರೀಖ್ಷೆಗೆ ಗುರಿಪಡಿಸಲಾಗಿತ್ತು.
ಭಾರತೀಯ ಸೈನ್ಯದ ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್ (ಎಸ್ ಎಫ್ ಸಿ)ಯು ತರಬೇತಿ ಕಾರ್ಯಾಗಾರದ ಭಾಗವಾಗಿ ಈ ಕ್ಷಿಪಣಿ ಪರೀಕ್ಷೆ ನಡೆಸಿತು. ಕ್ಷಿಪಣಿಯು ಆದಾಗಲೇ ಸಶಸ್ತ್ರ ಸೇನಾ ಪಡೆಗೆ ಸೇರ್ಪಡೆಯಾಗಿದೆ.
8.56 ಮೀಟರ್ ಎತ್ತರ, 4,600 ಕಿಲೋಗ್ರಾಂಗಳಷ್ಟು ತೂಗುವ ಮಧ್ಯಮ ವ್ಯಾಪ್ತಿಯ ಪ್ರಥ್ವಿ ಕ್ಷಿಪಣಿ 500 ರಿಂದ 1000 ಕೆಜಿ ತೂಕದ ಶಸ್ತ್ರಾಸ್ತ್ರಗಳನ್ನು ಹೊತ್ತೂಯ್ಯುವ ಸಾಮರ್ಥ್ಯವನ್ನೂ ಹೊಂದಿವೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಓ) ಮತ್ತು ಭಾರತ್ ಡೈನಾಮಿಕ್ಸ್ ಲಿಮಿಟೆಡ್ (ಬಿಡಿಎಲ್) ಜಂಟಿಯಾಗಿ ಈ ಕ್ಷಿಪಣಿಯನ್ನು ಅಭಿವೃದ್ದಿಪಡಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.