ಮಣಿಕರ್ಣಿಕಾ ಚಿತ್ರದ ವಿರುದ್ಧದ ಪ್ರತಿಭಟನೆಗೆ ಕೈ ಜೋಡಿಸಿದ ಕರಣಿ ಸೇನಾ!
ರಾಜಸ್ಥಾನದ ಬ್ರಾಹ್ಮಣ ಮಹಾಸಭಾ ಆರೋಪಕ್ಕೆ ಪದ್ಮಾವತ್ ಚಿತ್ರವನ್ನು ವಿರೋಧಿಸಿದ್ದ ಕರಣಿ ಸೇನಾ ಧ್ವನಿಗೂಡಿಸಿದೆ.
ಜೈಪುರ: ಝಾನ್ಸಿ ರಾಣಿ ಲಕ್ಷ್ಮಿಬಾಯಿ ಜೀವನ ಆಧಾರಿತ, ಕಂಗನಾ ರಣೌತ್ ಅಭಿನಯದ ಐತಿಹಾಸಿಕ ಚಿತ್ರ ‘ಮಣಿಕರ್ಣಿಕಾ- ದಿ ಕ್ವೀನ್ ಆಫ್ ಝಾನ್ಸಿ'ಯಲ್ಲಿ ಆಕ್ಷೇಪಾರ್ಹ ದೃಶ್ಯಗಳಿವೆ ಎಂದು ಆರೋಪಿಸಿರುವ ರಾಜಸ್ಥಾನದ ಬ್ರಾಹ್ಮಣ ಮಹಾಸಭಾ ಆರೋಪಕ್ಕೆ ಪದ್ಮಾವತ್ ಚಿತ್ರವನ್ನು ವಿರೋಧಿಸಿದ್ದ ಕರಣಿ ಸೇನಾ ಧ್ವನಿಗೂಡಿಸಿದೆ.
ಮಣಿಕರ್ಣೀಕಾ ಚಿತ್ರವನ್ನು ವಿರೋಧಿಸುತ್ತಿರುವ ಸರ್ವ್ ಬ್ರಾಹ್ಮಣ ಮಹಾಸಭೆಯ ಪ್ರತಿಭಟನೆಯನ್ನು ಬೆಂಬಲಿಸಲು ಕರಣಿ ಸೇನಾ ನಿರ್ಧರಿಸಿದ್ದು, ಚಿತ್ರದಲ್ಲಿ ಬ್ರಿಟೀಷ್ ಅಧಿಕಾರಿ ಹಾಗೂ ಝಾನ್ಸಿ ರಾಣಿಯ ನಂಟನ್ನು ತೋರಿಸಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.
ಬ್ರಾಹ್ಮಣ ಸಮುದಾಯಕ್ಕೆ ಅವಮಾನವಾದರೆ ರಜಪೂತರು ಸುಮ್ಮನಿರುವುದಿಲ್ಲ ಎಂದು ಕರಣಿ ಸೇನಾ ಎಚ್ಚರಿಕೆ ನೀಡಿದ್ದು, ಮಣಿಕರ್ಣಿಕಾ ಚಿತ್ರದ ವಿರುದ್ಧ ಪ್ರತಿಭಟನೆ ನಡೆಸಲು ಕರಣಿ ಸೇನಾ ತೀರ್ಮಾನಿಸಿದೆ ಎಂದು ಸಂಸ್ಥಾಪಕ ಲೋಕೇಂದ್ರ ಸಿಂಗ್ ಕಲ್ವಿ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.