ಅಪಘಾತಕ್ಕೀಡಾದ ಕಾರು 
ದೇಶ

ರಾಜಸ್ತಾನ: ರಸ್ತೆ ಅಪಘಾತದಲ್ಲಿ ಪ್ರಧಾನಿ ಮೋದಿ ಪತ್ನಿ ಜಶೋದಾ ಬೆನ್ ತಲೆಗೆ ಗಾಯ

ರಾಜಸ್ತಾನದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪ್ರಧಾನಿ ಮೋದಿ ಅವರ ಪತ್ನಿ ಜಶೋದಾಬೆನ್ ಅವರ ತಲೆಗೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದುಬಂದಿದೆ.

ಜೈಪುರ: ರಾಜಸ್ತಾನದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪ್ರಧಾನಿ ಮೋದಿ ಅವರ ಪತ್ನಿ ಜಶೋದಾಬೆನ್ ಅವರ ತಲೆಗೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ರಾಜಸ್ತಾನದ ಕೋಟಾ-ಚಿತ್ತೋರ್ ಹೆದ್ದಾರಿಯಲ್ಲಿ ಈ ಕಾರು ಅಪಘಾತ ಸಂಭವಿಸಿದ್ದು, ಘಟನೆಯವ್ವಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿರುವ ಜಶೋದಾಬೆನ್ ಅವರನ್ನು ಚಿತ್ತೋರ್ ಘಡ್  ನಲ್ಲಿರುವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. 
ಜಶೋದಾ ಬೆನ್ ಅವರ ಕುಟುಂಬದ ಮೂಲಗಳು ತಿಳಿಸಿರುವಂತೆ ರಾಜಸ್ತಾನದ ಕೋಟಾದಲ್ಲಿ ಸಂಬಂಧಿಕರ ಮದುವೆಗೆ ತೆರಳಿದ್ದ ಜಶೋದಾಬೆನ್ ಅವರು ಗುಜರಾತ್ ಗೆ ಕಾರಿನಲ್ಲಿ ವಾಪಸ್ ಆಗುತ್ತಿದ್ದರಂತೆ. ಜಶೋದಾ ಬೆನ್  ಅವರೊಂದಿಗೆ ಅವರ ಸಹೋದರ ಅಶೋಕ್ ಮೋದಿ ಅವರು ಕೂಡ ತೆರಳಿದ್ದರು. ಗುಜರಾತ್ ವಾಪಸ್ ಆಗುತ್ತಿದ್ದಾಗ ಈ ಘಟನೆ ಸಂಭಸಿದೆ ಎನ್ವಲಾಗಿದೆ.
ಇನ್ನು ಪ್ರಧಾನಿ ಮೋದಿ ಪತ್ನಿ ಜಶೋದಾ ಬೆನ್ ಅವರು ಅವರ ಸಹೋದರ ಅಶೋಕ್ ಮೋದಿ ಅವರೊಂದಿಗೆ ಮೆಹ್ಸಾನಾ ಜಿಲ್ಲೆಯ ಉಂಜಾ ಪಟ್ಟಣದಲ್ಲಿ ನೆಲೆಸಿದ್ದು ಅವರ ಕುಟುಂಬಕ್ಕೆ ಮೆಹ್ಸಾನಾ ಜಿಲ್ಲೆಯ ಪೊಲೀಸರನ್ನು ಭದ್ರತೆಗೆ  ನಿಯೋಜಿಸಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?