ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ 
ದೇಶ

ಭಾರತೀಯ ಮುಸ್ಲಿಮರನ್ನು 'ಪಾಕಿಸ್ತಾನಿ'ಗಳೆಂದು ಕರೆಯುವವರನ್ನು ಶಿಕ್ಷಿಸಿ: ಓವೈಸಿ

ಭಾರತೀಯ ಮುಸ್ಲಿಮರನ್ನು 'ಪಾಕಿಸ್ತಾನಿ'ಗರು ಎಂದು ಕರೆಯುವವರನ್ನು ಜೈಲಿಗೆ ಹಾಕಬೇಕೆಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಂಗಳವಾರ ಹೇಳಿದ್ದಾರೆ...

ಹೈದರಾಬಾದ್: ಭಾರತೀಯ ಮುಸ್ಲಿಮರನ್ನು 'ಪಾಕಿಸ್ತಾನಿ'ಗರು ಎಂದು ಕರೆಯುವವರನ್ನು ಜೈಲಿಗೆ ಹಾಕಬೇಕೆಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಂಗಳವಾರ ಹೇಳಿದ್ದಾರೆ. 
ಲೋಕಸಭೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಧನ್ಯವಾದ ಹೇಳುವ ಭಾಷಣದಲ್ಲಿ ಮಾತನಾಡಿರುವ ಓವೈಸಿಯವರು, ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನಿಗಳು ಎಂದು ಕರೆಯುವವರಿಗೆ ಶಿಕ್ಷೆ ನೀಡಬೇಕು. ಅಂತಹವರನ್ನು ಜೈಲಿಗಟ್ಟಬೇಕು. ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಬೇಕೆಂದು ಸರ್ಕಾರಕ್ಕೆ ತಿಳಿಸಿದ್ದಾರೆ. 
ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನಿಗಳೆಂದು ಕರೆಯುವವರ ವಿರುದ್ಧ ಕಾನೂನು ಜಾರಿಗೆ ತರಬೇಕು. ಅಂತಹವರಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ನೀಡಬೇಕು. ಆದರೆ. ಬಿಜೆಪಿ ನೇತೃತ್ವದ ಎನ್'ಡಿಎ ಸರ್ಕಾರ ಇಂತಹ ಕಾನೂನನ್ನು ಜಾರಿಗೆ ತರುವುದಿಲ್ಲ. ಭಾರತದಲ್ಲಿರುವ ಮುಸ್ಲಿಮರು ಮೊಹಮ್ಮದ್ ಅಲಿ ಜಿನ್ನಾರವರ ಎರಡು ರಾಷ್ಟ್ರಗಳ ಸಿದ್ಧಾಂತಗಳನ್ನು ತಿರಸ್ಕರಿಸಿದ್ದಾರೆಂದು ತಿಳಿಸಿದ್ದಾರೆ. 
ಇದೇ ವೇಳೆ ತ್ರಿವಳಿ ತಲಾಖ್ ಕುರಿತಂತೆ ಮಾತನಾಡಿರುವ ಓವೈಸಿ, ಸರ್ಕಾರದ ನಿರ್ಧಾರ ಮಹಿಳಾ ವಿರೋಧಿಯಾಗಿದೆ ಎಂದಿದ್ದಾರೆ.
ಕೇಂದ್ರ ಸರ್ಕಾರ ಪ್ರಸ್ತಾಪ ಮಾಡಿರುವ ತ್ರಿವಳಿ ತಲಾಖ್ ಮಸೂದೆ, ತ್ರಿವಳಿ ತಲಾಖ್ ನ್ನು ಕಾನೂನು ಬಾಹಿರವಾಗಿಸುತ್ತದೆ ಮತ್ತು ಅನೂರ್ಜಿತಗೊಳಿಸುತ್ತದೆ. 3 ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸುತ್ತದೆ. ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿತ್ತಾದರೂ. ರಾಜ್ಯಸಭೆಯಲ್ಲಿ ವಿರೋಧಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದರಿಂದ ಅಂಗೀಕಾರಗೊಂಡಿಲ್ಲ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT