ಅಪಘಾತ 
ದೇಶ

ಬ್ಯಾರಿಕೇಡ್‍ಗೆ ಕಟ್ಟಿದ್ದ ತಂತಿ ಸಿಲುಕಿ ಬೈಕ್ ಸವಾರ ಸಾವು, ಪೊಲೀಸ್ ಅಮಾನತು

ರಸ್ತೆ ಮಧ್ಯೆ ನಿಲ್ಲಿಸಿದ್ದ ಎರಡು ಪೊಲೀಸ್ ಬ್ಯಾರಿಕೇಡ್ ಗೆ ಕಟ್ಟಿದ್ದ ತಂತಿ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟ ದಾರುಣ ಘಟನೆ ದೆಹಲಿಯಲ್ಲಿ ನಡೆದಿದೆ...

ನವದೆಹಲಿ: ರಸ್ತೆ ಮಧ್ಯೆ ನಿಲ್ಲಿಸಿದ್ದ ಎರಡು ಪೊಲೀಸ್ ಬ್ಯಾರಿಕೇಡ್ ಗೆ ಕಟ್ಟಿದ್ದ ತಂತಿ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟ ದಾರುಣ ಘಟನೆ ದೆಹಲಿಯಲ್ಲಿ ನಡೆದಿದೆ. 
ಬೆಳಗಿನ ಜಾವ 1 ಗಂಟೆ ಸುಮಾರಿಗೆ ಬೈಕ್ ಸವಾರ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಪಾಳಿ ಪೇದೆಗಳು ಎರಡು ಬ್ಯಾರಿಕೇಡ್ ಗೆ ತಂತಿ ಕಟ್ಟಿದ್ದು ಕತ್ತಲಲ್ಲಿ ಇದನ್ನು ಗಮನಿಸದೆ ಬಂದ ಬೈಕ್ ಸವಾರ ಮೃತಪಟ್ಟಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 
ಈ ಘಟನೆ ಸಂಬಂಧಿಸಿದಂತೆ ಇನ್ ಪೆಕ್ಟರ್ ಅನ್ನು ಬೇರೆ ಕಡೆಗೆ ವರ್ಗಾಹಿಸಲಾಗಿದೆ. ಇನ್ನು ನಾಲ್ವರು ಪೇದೆಗಳನ್ನು ಕೆಲಸದಿಂದ ಅಮಾನತು ಮಾಡಲಾಗಿದೆ ಎಂದರು. 
ಮೃತ ಸವಾರನನ್ನು ಅಭಿಶೇಕ್ ಎಂದು ಗುರುತಿಸಲಾಗಿದೆ. ಅಭಿಶೇಕ್ ಖಾಸಗಿ ಸಂಸ್ಥೆಯಲ್ಲಿ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದು ಕೆಲಸ ಮುಗಿಸಿ ಬರುವಾಗ ಈ ಅವಘಡ ಸಂಭವಿಸಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದ ಎಂದು ಉಪ ಪೊಲೀಸ್ ಆಯುಕ್ತ ಅಸ್ಲಾಂ ಖಾನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ನಿರ್ಗಮನ: ಕರ್ನಾಟಕದಲ್ಲಿ ಕಾಂಗ್ರೆಸ್‌ನ 'ಅಹಿಂದ ಮತಬ್ಯಾಂಕ್' ಮೇಲೆ ಪರಿಣಾಮ?

SCROLL FOR NEXT