ನವದೆಹಲಿ: ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಒಪ್ಪಂದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಪ್ರಶ್ನೆಗೆ ಉತ್ತರಿಸದೆ ವಿಷಯ ಮರೆ ಮಾಚುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದಿದ್ದಾರೆ.
ಇಂದು ಮತ್ತೆ ಪ್ರಧಾನಿ ಮೋದಿ ಅವರು ನಿನ್ನೆ ಸಂಸತ್ತಿನಲ್ಲಿ ಮಾಡಿದ ಭಾಷಣ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ನನ್ನ ಮೂಲ ಪ್ರಶ್ನೆಗಳಿಗೆ ಪ್ರಧಾನಿ ಉತ್ತರಿಸದಿರುವುದು ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂಬುದು ಸ್ಪಷ್ಟವಾಗುತ್ತಿದೆ ಎಂದಿದ್ದಾರೆ.
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಹಿಂದೆ ಖರೀದಿ ಮಾಡುತ್ತಿರುವ ಯುದ್ಧ ವಿಮಾನಗಳ ಬೆಲೆಯನ್ನು ದೇಶಕ್ಕೆ ತಿಳಿಸುವುದಾಗಿ ಹೇಳಿದ್ದರು. ಆದರೆ ಈಗ ಅದು ದೇಶದ ಗೌಪ್ಯತೆ ಎಂದು ಹೇಳುತ್ತಿದ್ದಾರೆ. ಈ ಎರಡು ಹೇಳಿಕೆಯಲ್ಲಿ ಯಾವುದೇ ಸರಿ ಎಂದು ರಾಹುಲ್ ಪ್ರಶ್ನಿಸಿದ್ದಾರೆ.
ಈ ಹಿಂದೆಯೂ ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಫೆಲ್ ಡೀಲ್ ಗೆ ಸಂಬಂಧಿಸಿದಂತೆ ಮೂರು ಪ್ರಶ್ನೆಗಳನ್ನು ಕೇಳಿದ್ದೆ. ಆ ಪ್ರಶ್ನೆಗಳಿಗೂ ಅವರು ಉತ್ತರಿಸಿಲ್ಲ. ಇದೆಲ್ಲವನ್ನು ಗಮನಿಸಿದರೆ ಅಲ್ಲಿ ಏನೋ ನಡೆದಿದೆ ಎಂಬುದು ಸ್ಷಷ್ಟವಾಗುತ್ತಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics