ಸಂಗ್ರಹ ಚಿತ್ರ 
ದೇಶ

ಸಂಸತ್ ನಲ್ಲಿ ಪ್ರಧಾನಿ ಮೋದಿ ಭಾಷಣದ ವೇಳೆ ಘೋಷಣೆ ಕೂಗುವಂತೆ ಉಪಾಯ ನೀಡಿದ್ದ ರಾಹುಲ್!

ಲೋಕಸಭೆಯಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಮಾತನಾಡುವಾಗ ಘೋಷಣೆ ಕೂಗುವಂತೆ ಕಾಂಗ್ರೆಸ್ ಅಧ್ಯಕ್ಷ...

ನವದೆಹಲಿ: ಲೋಕಸಭೆಯಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಮಾತನಾಡುವಾಗ ಘೋಷಣೆ ಕೂಗುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಸಂಸದರಿಗೆ ಸೂಚನೆ ನೀಡಿದ್ದರು ಎಂದು ಹೇಳಲಾಗುತ್ತಿದೆ.
ಮಾಧ್ಯಮವೊಂದು ವರದಿ ಮಾಡಿರುವಂತೆ ಸಂಸತ್ ನ ಲೋಕಸಭಾ ಕಲಾಪದ ವೇಳೆ ಪ್ರಧಾನಿ ನರೇಂದ್ರ ಮೋದಿ ಮಾತನಾಡುವಾಗ ಉದ್ದೇಶಪೂರ್ವಕವಾಗಿಯೇ ಕಾಂಗ್ರೆಸ್ ಸಂಸದರು, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ  ವಿರುದ್ಧ ಘೋಷಣೆಗಳನ್ನೂ ಕೂಗುತ್ತಿದ್ದರು. ಇದು ಕಲಾಪದ ನೇರ ದೃಶ್ಯಾವಳಿಯ ಸಂದರ್ಭದಲ್ಲೂ ದಾಖಲಾಗಿತ್ತು. ಕಾಂಗ್ರೆಸ್ ಸಂಸದರ ಈ ನಡೆ ಹಿಂದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸೂಚನೆ ಇತ್ತು ಎಂಬ ಮಾಹಿತಿ  ಹೊರಬಿದ್ದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡುವಾಗ ಅವರಿಗೆ ಅಡ್ಡಿಪಡಸಲೆಂದು ರಾಹುಲ್ ಗಾಂಧಿ ಕಾಂಗ್ರೆಸ್ ಸಂಸದರಿಗೆ ಸೂಚನೆ ನೀಡಿದ್ದರಂತೆ. ಅದರಂತೆ ಭಾಷಣದ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದರು ಕೇಂದ್ರ  ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ವಿಷಯಾಧರಿತ ಘೋಷಣೆ ಕೂಗುವಂತೆ ಸೂಚನೆ ನೀಡಿದ್ದರಂತೆ. ಇದಕ್ಕೆ ಇಂಬು ನೀಡುವಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಅವರೂ ಕೂಡ ಮಧ್ಯಾಹ್ಮ 12 ಗಂಟೆ ವೇಳೆಗೆ  ಕಾಂಗ್ರೆಸ್ ಪಕ್ಷದ ಎಲ್ಲ ಸದಸ್ಯರಿಗೂ ಕಲಾಪಕ್ಕೆ ಹಾಜರಾಗುವಂತೆ ಸೂಚನೆ ನೀಡಿದ್ದರಂತೆ.
ಈ ಪೈಕಿ ಕೆಲ ಸಂಸದರು ಪೂರ್ವಭಾವಿ ಸಿದ್ಧತೆ ಮಾಡಿಕೊಂಡೇ ಸದನಕ್ಕೆ ಆಗಮಿಸಿದ್ದರು. ಬಿಳಿ ಹಾಳೆಗಳ ಮೇಲೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಬರೆದು ಅದನ್ನು ಕಲಾಪಕ್ಕೆ ತಂದಿದ್ದರು. ಇಷ್ಟೇ ಪ್ರಧಾನಿ ಮೋದಿ  ಭಾಷಣದ ವೇಳೆ ಕಾಂಗ್ರೆಸ್ ಸಂಸದರು ಘೋಷಣೆಗಳನ್ನೂ ಕೂಗಿ-ಕೂಗಿ ಅವರ ಗಂಟಲು ಕೆಡದ ಹಾಗೆ ನೋಡಿಕೊಳ್ಳಲು ಸೋನಿಯಾಗಾಂಧಿ ಅವರು ಟಾಫಿಗಳನ್ನೂ (ಚಾಕಲೇಟ್)ಗಳನ್ನೂ ಕೂಡ ಕಾಂಗ್ರೆಸ್ ಸಂಸದರಿಗೆ  ನೀಡಿದ್ದರಂತೆ. ಅಷ್ಚೇ ಯಾವ ವಿಚಾರದ ಕುರಿತು ಘೋಷಣೆ ಕೂಗಬೇಕು ಯಾವ ಘೋಷಣೆ ಕೂಗಬೇಕು ಎಂಬಿತ್ಯಾದಿ ಅಂಶಗಳು ಮೊದಲೇ ನಿರ್ಧಾರವಾಗಿತ್ತು ಎಂದು ಕಾಂಗ್ರೆಸ್ ಸಂದರೊಬ್ಬರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಇನ್ನು ನಿನ್ನೆ ಸಂಸತ್ ನ ಲೋಕಸಭಾ ಕಲಾಪದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್